ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

T20WC: ಐಸಿಹಾಸಿಕ ಕ್ಷಣ; ಟಿ20 ವಿಶ್ವಕಪ್‌ನಲ್ಲಿ ನಮೀಬಿಯಾಗೆ ಚೊಚ್ಚಲ ಗೆಲುವು

Last Updated 20 ಅಕ್ಟೋಬರ್ 2021, 13:57 IST
ಅಕ್ಷರ ಗಾತ್ರ

ಅಬುಧಾಬಿ: ಐಸಿಸಿ ಟ್ವೆಂಟಿ-20 ವಿಶ್ವಕಪ್‌ ಟೂರ್ನಿಯಲ್ಲಿ ಬುಧವಾರ 'ಎ' ಗುಂಪಿನಲ್ಲಿ ನಡೆದ ಪಂದ್ಯದಲ್ಲಿ ನೆದರ್ಲೆಂಡ್ಸ್ ವಿರುದ್ಧ ನಮೀಬಿಯಾ ಆರು ವಿಕೆಟ್ ಅಂತರದ ಗೆಲುವು ದಾಖಲಿಸಿದೆ.

ಇದು ನಮೀಬಿಯಾ ಪಾಲಿಗೆ ಐತಿಹಾಸಿಕ ಕ್ಷಣವಾಗಿದ್ದು, ಟ್ವೆಂಟಿ-20 ವಿಶ್ವಕಪ್‌ನಲ್ಲಿ ಚೊಚ್ಚಲಗೆಲುವು ದಾಖಲಿಸಿದೆ.

165 ರನ್ ಗೆಲುವಿನ ಗುರಿ ಬೆನ್ನತ್ತಿದ ನಮೀಬಿಯಾಗೆ ಡೇವಿಡ್ ವೈಸ್ ಬಿರುಸಿನ ಅರ್ಧಶತಕ ಗಳಿಸುವ ಮೂಲಕ ಗೆಲುವಿನ ರೂವಾರಿಯಿಸಿದರು.ಕೇವಲ 40 ಎಸೆತಗಳನ್ನು ಎದುರಿಸಿದ ಡೇವಿಡ್,66 ರನ್ ಗಳಿಸಿ ಔಟಾಗದೆ ಉಳಿದರು.

ಈ ಮೂಲಕ ಇನ್ನೊಂದು ಓವರ್ ಬಾಕಿ ಉಳಿದಿರುವಂತೆಯೇ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಕೊನೆಯ ಹಂತದಲ್ಲಿ ಅಬ್ಬರಿಸಿದ ಡೇವಿಡ್ ವೈಸ್ಇನ್ನಿಂಗ್ಸ್‌ನಲ್ಲಿ ನಾಲ್ಕು ಬೌಂಡರಿ ಹಾಗೂ ಐದು ಸಿಕ್ಸರ್‌ಗಳು ಸೇರಿದ್ದವು.

ಇವರಿಗೆ ತಕ್ಕ ಸಾಥ್ ನೀಡಿದ ನಾಯಕ ಗೆರಾರ್ಡ್‌ ಎರಾಸ್ಮಸ್‌ 32 ಹಾಗೂ ಜೆ.ಜೆ. ಸ್ಮಿಟ್ 14 ರನ್ ಗಳಿಸಿ ಅಜೇಯರಾಗುಳಿದರು.

ಇದರೊಂದಿಗೆ ಮೊದಲ ಪಂದ್ಯದಲ್ಲಿ ಸೋಲು ಅನುಭವಿಸಿದನಮೀಬಿಯಾ ಗೆಲುವಿನ ಹಾದಿಗೆ ಮರಳಿದೆ. ಅತ್ತ ನೆದರ್ಲೆಂಡ್ಸ್ ಸತತ ಎರಡನೇ ಸೋಲಿಗೆ ಶರಣಾಗಿದೆ.

ಈ ಮೊದಲು ಬ್ಯಾಟಿಂಗ್ ನಡೆಸಿದ ನೆದರ್ಲೆಂಡ್ಸ್ ಆರಂಭಿಕ ಬ್ಯಾಟರ್ ಮ್ಯಾಕ್ಸ್ ಒಡೌಡ್ ಆಕರ್ಷಕ ಅರ್ಧಶತಕದ (70) ನೆರವಿನಿಂದ ನಾಲ್ಕು ವಿಕೆಟ್ ನಷ್ಟಕ್ಕೆ 164 ರನ್‌ಗಳ ಸವಾಲಿನ ಮೊತ್ತ ಪೇರಿಸಿತ್ತು.

56 ಎಸೆತಗಳನ್ನು ಎದುರಿಸಿದ ಒಡೌಡ್ ಆರು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 70 ರನ್ ಗಳಿಸಿದರು. ಅವರಿಗೆ ತಕ್ಕ ಸಾಥ್ ನೀಡಿದ ಆ್ಯಕರ್‌ಮ್ಯಾನ್ (35) ಹಾಗೂ ವಿಕೆಟ್ ಕೀಪರ್ ಸ್ಕಾಟ್ ಎಡ್ವರ್ಡ್ಸ್ (21*) ಸವಾಲಿನ ಮೊತ್ತ ಪೇರಿಸಲು ನೆರವಾದರು.

ಕೇವಲ 11 ಎಸೆತಗಳನ್ನು ಎದುರಿಸಿದ ಎಡ್ವರ್ಡ್ಸ್ ಇನ್ನಿಂಗ್ಸ್‌ನಲ್ಲಿ ಎರಡು ಬೌಂಡರಿ ಹಾಗೂ ಒಂದು ಸಿಕ್ಸರ್ ಸೇರಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT