ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್‌ಗೆ ಭಾರತ ತಂಡ ಪ್ರಕಟ: ತಂಡಕ್ಕೆ ಮರಳಿದ ಬೂಮ್ರಾ

Published 29 ಫೆಬ್ರುವರಿ 2024, 11:20 IST
Last Updated 29 ಫೆಬ್ರುವರಿ 2024, 11:20 IST
ಅಕ್ಷರ ಗಾತ್ರ

ನವದೆಹಲಿ: ಇಂಗ್ಲೆಂಡ್‌ ವಿರುದ್ಧದ 5ನೇ ಟೆಸ್ಟ್‌ ಪಂದ್ಯಕ್ಕೆ 16 ಆಟಗಾರರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ವೇಗದ ಬೌಲರ್‌ ಜಸ್‌ಪ್ರೀತ್ ಬೂಮ್ರಾ ತಂಡಕ್ಕೆ ಮರಳಿದ್ದಾರೆ.

ರಾಂಚಿಯಲ್ಲಿ ನಡೆದ ನಾಲ್ಕನೇ ಟೆಸ್ಟ್‌ನಲ್ಲಿ ಬೂಮ್ರಾ ಅವರಿಗೆ ವಿಶ್ರಾಂತಿ ನೀಡಲಾಗಿತ್ತು. ಧರ್ಮಶಾಲಾದಲ್ಲಿ ನಡೆಯುವ 5ನೇ ಟೆಸ್ಟ್‌ಗೆ ಅವರು ತಂಡವನ್ನು ಸೇರಿದ್ದಾರೆ. ಕನ್ನಡಿಗ ಕೆ.ಎಲ್‌ ರಾಹುಲ್‌ ಮತ್ತು ವಾ. ಸುಂದರ್‌ ತಂಡದಿಂದ ಹೊರಗುಳಿದಿದ್ದಾರೆ. 

ಮಾರ್ಚ್‌ 7ರಿಂದ ಧರ್ಮಶಾಲಾದಲ್ಲಿ ಇಂಗ್ಲೆಂಡ್‌ ವಿರುದ್ಧ ಅಂತಿಮ ಟೆಸ್ಟ್‌ ಪಂದ್ಯ ನಡೆಯಲಿದೆ.

ತಂಡ ಹೀಗಿದೆ:

ರೋಹಿತ್ ಶರ್ಮಾ (ನಾಯಕ), ಜಸ್‌ಪ್ರೀತ್ ಬೂಮ್ರಾ (ಉಪನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ರಜತ್‌ ಪಾಟಿದಾರ್‌, ಸರ್ಫರಾಜ್‌ ಖಾನ್‌, ಕೆ,ಎಸ್, ಭರತ್ (ವಿಕೆಟ್‌ ಕೀಪರ್), ಧ್ರುವ್ ಜುರೇಲ್ (ವಿಕೆಟ್‌ ಕೀಪರ್), ದೇವದತ್ತ ಪಡಿಕ್ಕಲ್‌,  ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜ, ಅಕ್ಷರ್ ಪಟೇಲ್, ಕುಲದೀಪ್‌ ಯಾದವ್, ಮೊಹಮ್ಮದ್ ಸಿರಾಜ್, ಮುಕೇಶ್ ಕುಮಾರ್, ಆಕಾಶ್‌ ದೀಪ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT