ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕಿ ಮೇಲೆ ಅತ್ಯಾಚಾರ: ಕ್ರಿಕೆಟಿಗ ಲಮಿಚಾನೆ ಮೇಲೆ ಆರೋಪ

Last Updated 9 ಸೆಪ್ಟೆಂಬರ್ 2022, 4:16 IST
ಅಕ್ಷರ ಗಾತ್ರ

ಕಠ್ಮಂಡು: ನೇಪಾಳ ಕ್ರಿಕೆಟ್ ತಂಡದ ನಾಯಕ ಸಂದೀಪ್ ಲಮಿಚಾನೆ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ.

ಸಂತ್ರಸ್ತ ಬಾಲಕಿಯು (17 ವರ್ಷ) ಗೋಶಾಲಾ ಮೆಟ್ರೊಪಾಲಿಟಿನ್ ಪೊಲೀಸರಿಗೆ ದೂರು ನೀಡಿದ್ದಾಳೆ. ಸಂದೀಪ್ ಮೇಲೆ ಎಫ್‌ಐಆರ್ ದಾಖಲಾಗಿದೆ.

ಮೂರು ವಾರಗಳ ಹಿಂದೆ ಈ ಘಟನೆ ನಡೆದಿದೆ. ತನ್ನನ್ನು ಸಂದೀಪ್ ಕಠ್ಮಂಡುವಿನ ವಿವಿಧ ತಾಣಗಳಲ್ಲಿ ಸುತ್ತಾಡಿ ನಂತರ ಹೋಟೆಲ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದರೆಂದು ಬಾಲಕಿಯು ದೂರಿನಲ್ಲಿ ಉಲ್ಲೇಖಿಸಿದ್ದಾಳೆ.

‘ಸಿಸಿಟಿವಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ. ಸಾಕ್ಷ್ಯಗಳನ್ನು ಕಲೆಹಾಕಲಾಗುತ್ತಿದೆ. ಸಮಗ್ರ ತನಿಖೆ ನಡೆಸಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ಸಂದೀಪ್ ಕೆರಿಬಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡುತ್ತಿದ್ದಾರೆ. 2018ರಲ್ಲಿ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಆಯ್ಕೆಯಾಗಿದ್ದರು. ಅದರೊಂದಿಗೆ ಐಪಿಎಲ್‌ನಲ್ಲಿ ಅವಕಾಶ ಪಡೆದ ನೇಪಾಳದ ಮೊದಲ ಆಟಗಾರನೆಂಬ ಹೆಗ್ಗಳಿಎಕ ಅವರದ್ದಾಗಿತ್ತು. ಇತ್ತೀಚೆಗೆ ಅವರನ್ನು ನೇಪಾಳ ತಂಡಕ್ಕೆ ನಾಯಕರನ್ನಾಗಿ ನೇಮಕ ಮಾಡಲಾಗಿತ್ತು.

ನೇಪಾಳ ಕ್ರಿಕೆಟ್ ಸಂಸ್ಥೆಯ ಪದಾಧಿಕಾರಿಗಳೊಂದಿಗೆ ದೂರವಾಣಿಯಲ್ಲಿ ಮಾತನಾಡಿದ್ದು, ತಾವು ಅತ್ಯಾಚಾರ ಮಾಡಿಲ್ಲ. ಆರೋಪಗಳು ನಿರಾಧಾರವಾಗಿವೆ. ಕೆರಿಬಿಯನ್ ಲೀಗ್ ಮುಗಿದ ಮೇಲೆ ನೇಪಾಳಕ್ಕೆ ಹಿಂತಿರುಗುವುದಾಗಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT