ಶನಿವಾರ, ಜನವರಿ 22, 2022
16 °C

ಕೋವಿಡ್ ಹೊಸತಳಿ ಹಾವಳಿ: ಮಹಿಳೆಯರ ಏಕದಿನ ವಿಶ್ವಕಪ್ ಕ್ವಾಲಿಫೈಯರ್ ಸ್ಥಗಿತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಜೋಹಾನ್ಸ್‌ಬರ್ಗ್/ದುಬೈ: ದಕ್ಷಿಣ ಆಫ್ರಿಕಾದಲ್ಲಿ ಕೊರೊನಾ ವೈರಾಣುವಿನ ಹೊಸ ತಳಿ ಹಾವಳಿಯ ಹಿನ್ನೆಲೆಯಲ್ಲಿ ನೆದರ್ಲೆಂಡ್ಸ್‌ ವಿರುದ್ಧದ ಎರಡು ಏಕದಿನ ಪಂದ್ಯಗಳನ್ನು ಮುಂದೂಡಲಾಗಿದೆ.

ಶುಕ್ರವಾರ ಸೆಂಚುರಿಯನ್‌ನಲ್ಲಿ ಆಯೋಜಿಸಲಾಗಿದ್ದ ಮೊದಲ ಪಂದ್ಯವನ್ನು ಅರ್ಧಕ್ಕೆ ಸ್ಥಗಿತಗೊಳಿಸಲಾಗಿತ್ತು.

‘ಈ ಅನಿರೀಕ್ಷಿತ ಪರಿಸ್ಥಿತಿಯಿಂದಾಗಿ ತುಂಬಾ ಬೇಸರವಾಗಿದೆ. ಆದರೆ ಪ್ರವಾಸಿ ತಂಡಗಳ ಸುರಕ್ಷತೆ ಬಹುಮುಖ್ಯವಾದದ್ದು. ಆದ್ದರಿಂದ ಅನಿವಾರ್ಯವಾಗಿ ಪಂದ್ಯಗಳನ್ನು ಮುಂದೂಡಲಾಗಿದೆ’ ಎಂದು ಕ್ರಿಕೆಟ್ ದಕ್ಷಿಣ ಆಫ್ರಿಕಾದ ಸಿಇಒ ಪೊಲೆಟ್ಸಿ ಮೊಸೆಕಿ ಹೇಳಿದ್ದಾರೆ.

ವಿಶ್ವಕಪ್ ಕ್ವಾಲಿಫೈಯರ್ ಸ್ಥಗಿತ: ಮಹಿಳೆಯರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗಾಗಿ ಹರಾರೆಯಲ್ಲಿ ಆಯೋಜಿಸಲಾಗಿದ್ದ ಕ್ವಾಲಿಫೈಯರ್ ಸುತ್ತಿನ ಪಂದ್ಯಗಳನ್ನು ರದ್ದುಗೊಳಿಸಲಾಗಿದೆ. ಈ ಸುತ್ತಿನಲ್ಲಿ ಪಾಕಿಸ್ತಾನ, ವೆಸ್ಟ್ ಇಂಡೀಸ್ ಮತ್ತು ಬಾಂಗ್ಲಾದೇಶ ತಂಡಗಳು ಆಡಬೇಕಿತ್ತು.

‘ತಂಡಗಳ ರ‍್ಯಾಂಕಿಂಗ್‌ ಆಧಾರದಲ್ಲಿ ಅರ್ಹತೆಗೆ ಪರಿಗಣಿಸಲಾಗಿದೆ. ಇದರಿಂದಾಗಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ವೆಸ್ಟ್ ಇಂಡೀಸ್ ತಂಡಗಳು ನ್ಯೂಜಿಲೆಂಡ್‌ನಲ್ಲಿ ನಡೆಯಲಿರುವ ಇನ್ನೊಂದು ಹಂತಕ್ಕೆ ಮುನ್ನಡೆಯಲಿವೆ’ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು