ಬುಧವಾರ, ಫೆಬ್ರವರಿ 1, 2023
26 °C

IND vs NZ: 3ನೇ ಏಕದಿನ ಪಂದ್ಯ– ಟಾಸ್ ಗೆದ್ದ ನ್ಯೂಜಿಲೆಂಡ್ ಬೌಲಿಂಗ್ ಆಯ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಕ್ರೈಸ್ಟ್ ಚರ್ಚ್: ಇಲ್ಲಿ ನಡೆಯುತ್ತಿರುವ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. 

ಮಳೆಯಿಂದ ರದ್ದಾದ 2ನೇ ಏಕದಿನ ಪಂದ್ಯದಲ್ಲಿ ಇದ್ದ ತಂಡವನ್ನೇ ಭಾರತ ತಂಡ ಉಳಿಸಿಕೊಂಡಿದೆ. ನ್ಯೂಜಿಲೆಂಡ್ ತಂಡದಲ್ಲಿ ಮೈಕಲ್ ಬ್ರೇಸ್‌ವೆಲ್ ಬದಲಿಗೆ ಆಡಂ ಮಿಲ್ನೆ ಅವರಿಗೆ ಅವಕಾಶ ನೀಡಲಾಗಿದೆ.

ತುಂತುರು ಮಳೆ ಇದ್ದುದರಿಂದ ಪಂದ್ಯ ಕೊಂಚ ವಿಳಂಬವಾಯಿತು. ಆದರೆ, ಯಾವುದೇ ಓವರ್‌ಗಳ ಕಡಿತ ಮಾಡಲಾಗಿಲ್ಲ. 

ಹ್ಯಾಮಿಲ್ಟನ್‌ನ 2ನೇ ಪಂದ್ಯ ಮಳೆಯಲ್ಲಿ ಕೊಚ್ಚಿಹೋಗಿತ್ತು. ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ನ್ಯೂಜಿಲೆಂಡ್ ತಂಡ 1–0 ಮುನ್ನಡೆಯಲ್ಲಿದೆ. ನವೆಂಬರ್ 25ರಲ್ಲಿ ನಡೆದ ಮೊದಲ ಪಂದ್ಯವನ್ನು 7 ವಿಕೆಟ್‌ಗಳಿಂದ ನ್ಯೂಜಿಲೆಂಡ್ ಗೆದ್ದುಕೊಂಡಿತ್ತು.

ಭಾರತ ತಂಡ: ಶಿಖರ್ ಧವನ್(ನಾಯಕ), ಶುಭಮನ್ ಗಿಲ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ದೀಪಕ್ ಚಾಹರ್, ಉಮ್ರಾನ್ ಮಲಿಕ್, ಆರ್ಶ್‌ದೀಪ್ ಸಿಂಗ್ ಮತ್ತು ಯಜ್ವೇಂದ್ರ ಚಾಹಲ್

ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಡೆವೊನ್ ಕಾನ್ವೆ, ಟಾಮ್ ಲಥಾಮ್, ಡೆರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಆ್ಯಡಂ ಮಿಲ್ನೆ, ಟಿಮ್ ಸೌಥಿ, ಮ್ಯಾಟ್ ಹೆನ್ರಿ, ಲಾಕಿ ಫರ್ಗ್ಯುಸನ್, ಮಿಚೆಲ್ ಸ್ಯಾಂಟನರ್ 

 
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು