ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಗಿ ಭದ್ರತೆಯಲ್ಲಿ ಪಾಕಿಸ್ತಾನ ತೊರೆಯಲು ಸಜ್ಜಾದ ನ್ಯೂಜಿಲೆಂಡ್ ತಂಡ

Last Updated 18 ಸೆಪ್ಟೆಂಬರ್ 2021, 12:36 IST
ಅಕ್ಷರ ಗಾತ್ರ

ಇಸ್ಲಾಮಾಬಾದ್: ಪ್ರವಾಸ ಮೊಟಕುಗೊಳಿಸಿದ ಒಂದು ದಿನದ ಬಳಿಕ ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಪಾಕಿಸ್ತಾನ ತೊರೆಯಲು ಸಜ್ಜಾಗಿದೆ. ಆ ಹಿನ್ನೆಲೆಯಲ್ಲಿ ಬುಲೆಟ್‌ ಪ್ರೂಫ್‌ ಬಸ್‌ಗಳ ಮೂಲಕ ನ್ಯೂಜಿಲೆಂಡ್ ತಂಡವು ಇಸ್ಲಾಮಾಬಾದ್ ವಿಮಾನ ನಿಲ್ದಾಣಕ್ಕೆ ಶನಿವಾರ ಬಂದಿಳಿದಿದೆ ಎಂದು ಸುದ್ದಿಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.

'ನ್ಯೂಜಿಲೆಂಡ್‌ ತಂಡವನ್ನು ಇಸ್ಲಾಮಾಬಾದ್‌ನಿಂದ ಕರೆದೊಯ್ಯಲು ಯುಎಇಯಿಂದ ವಿಶೇಷ ವಿಮಾನ ಬಂದಿದೆ. ನ್ಯೂಜಿಲೆಂಡ್‌ ಆಟಗಾರರು ಶನಿವಾರ ಸಂಜೆ ಪಾಕಿಸ್ತಾನದಿಂದ ನಿರ್ಗಮಿಸಲಿದ್ದಾರೆ' ಎಂದು ಭದ್ರತಾ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

'ನ್ಯೂಜಿಲೆಂಡ್‌ ಆಟಗಾರರನ್ನು ಕರೆತರುವ ಮಾರ್ಗದುದ್ದಕ್ಕೂ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಮಿಲಿಟರಿ ಕಮಾಂಡೊಗಳು ಮತ್ತು ಪೊಲೀಸರು ಬಸ್‌ಗೆ ಬೆಂಗಾವಲಾಗಿರುವುದನ್ನು ನಾನು ನೋಡಿದೆ' ಎಂದು ಪ್ರತ್ಯಕ್ಷದರ್ಶಿಯೊಬ್ಬರು ಎಎಫ್‌ಪಿಗೆ ತಿಳಿಸಿದ್ದಾರೆ.

ಪಾಕಿಸ್ತಾನದ ರಾವಲ್ಪಿಂಡಿಯಲ್ಲಿ ಶುಕ್ರವಾರ ಮೊದಲ ಏಕದಿನ ಪಂದ್ಯ ನಿಗದಿಯಾಗಿತ್ತು. ಆದರೆ, ಈ ಪ್ರವಾಸವನ್ನು ಮೊಟಕುಗೊಳಿಸಲು ನ್ಯೂಜಿಲೆಂಡ್‌ ತಂಡವು ಶುಕ್ರವಾರ ಹಠಾತ್ ನಿರ್ಧಾರ ತೆಗೆದುಕೊಂಡಿದೆ.

ಮಾಜಿ ವೇಗಿ ಶೋಯಬ್‌ ಅಖ್ತರ್‌, ಪಾಕಿಸ್ತಾನ ಕ್ರಿಕೆಟ್‌ ತಂಡದ ನಾಯಕ ಬಾಬರ್ ಆಜಂ ಹಾಗೂ ಪಾಕಿಸ್ತಾನ ತಂಡದ ಮಾಜಿ ನಾಯಕ ಶಾಹಿದ್ ಅಫ್ರಿದಿ ಸೇರಿದಂತೆ ಹಲವು ಕ್ರಿಕೆಟಿಗರು ನ್ಯೂಜಿಲೆಂಡ್‌ ನಿರ್ಧಾರದ ವಿರುದ್ಧ ಕಿಡಿಕಾರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT