ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯೂಜಿಲೆಂಡ್ ಪ್ರವಾಸ: ಅಂತರರಾಷ್ಟ್ರೀಯ ಟಿ20 ತಂಡದಲ್ಲಿ ಮಹೇಂದ್ರ ಸಿಂಗ್ ದೋನಿ

Last Updated 24 ಡಿಸೆಂಬರ್ 2018, 13:31 IST
ಅಕ್ಷರ ಗಾತ್ರ

ನವದೆಹಲಿ: ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಅಂತರರಾಷ್ಟ್ರೀಯ ಟ್ವೆಂಟಿ 20 ಸರಣಿಯಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ದೋನಿ ಆಡಲಿದ್ದಾರೆ.ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ಮುಗಿದ ನಂತರ ಟೀಂ ಇಂಡಿಯಾ ನ್ಯೂಜಿಲೆಂಡ್‍ಗೆ ಪ್ರವಾಸ ಕೈಗೊಳ್ಳಲಿದೆ.

ವೆಸ್ಟ್ ಇಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಅಂತರರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ದೋನಿ ಆಡಿರಲಿಲ್ಲ.

ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ದೋನಿ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಹಾಗಾಗಿ ದೋನಿಯನ್ನು ಕೈ ಬಿಟ್ಚು ವಿಂಡೀಸ್ ಮತ್ತು ಆಸ್ಟ್ರೇಲಿಯಾ ವಿರುದ್ಧ ಪಂದ್ಯದಲ್ಲಿ ರಿಷಬ್ ಪಂತ್ ಮತ್ತು ದಿನೇಶ್ ಕಾರ್ತಿಕ್‍ಗೆ ಅವಕಾಶ ನೀಡಲಾಗಿತ್ತು.

ನ್ಯೂಜಿಲೆಂಡ್ ವಿರುದ್ಧ ಆಡಲಿರುವ ಟೀಂ ಇಂಡಿಯಾ ಸದಸ್ಯರು: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆ,ಎಲ್ ರಾಹುಲ್, ಶಿಖರ್ ಧವನ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಕೇದಾಕ್ ಜಾಧವ್, ಎಂ,ಎಸ್ ದೋನಿ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ಕುಲದೀಪ್ ಯಾದವ್, ಯುಜುವೇಂದರ್ ಚಹಾಲ್, ಭುವನೇಶ್ವರ್ ಕುಮಾರ್, ಜಸ್‍ಪ್ರೀತ್ ಬೂರ್ಮಾ, ಖಲೀಲ್ ಅಹ್ಮದ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT