ಕೋವಿಡ್ ಭೀತಿ: ಬಾಂಗ್ಲಾ–ನ್ಯೂಜಿಲೆಂಡ್ ಟೆಸ್ಟ್ ಸರಣಿ ಮುಂದಕ್ಕೆ

ಢಾಕಾ: ನ್ಯೂಜಿಲೆಂಡ್ ಮತ್ತು ಬಾಂಗ್ಲಾದೇಶ ತಂಡಗಳ ನಡುವಣ ಟೆಸ್ಟ್ ಕ್ರಿಕೆಟ್ ಸರಣಿಯನ್ನು ಕೊರೊನಾ ಸೋಂಕು ಹರಡುವ ಭೀತಿಯಿಂದಾಗಿ ಮುಂದೂಡಲಾಗಿದೆ.
ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು (ಬಿಸಿಬಿ) ಮಂಗಳವಾರ ಈ ವಿಷಯವನ್ನು ಬಹಿರಂಗಪಡಿಸಿದೆ.
ಐಸಿಸಿ ಟೆಸ್ಟ್ ಚಾಂಪಿಯನ್‌ಷಿಪ್‌ನ ಅಂಗವಾಗಿ ಆಯೋಜನೆಯಾಗಿದ್ದ ಎರಡು ಪಂದ್ಯಗಳ ಈ ಸರಣಿಯಲ್ಲಿ ಪಾಲ್ಗೊಳ್ಳಲು ಕೇನ್ ವಿಲಿಯಮ್ಸನ್ ಸಾರಥ್ಯದ ನ್ಯೂಜಿಲೆಂಡ್ ತಂಡವು ಈ ವರ್ಷದ ಆಗಸ್ಟ್‌ನಲ್ಲಿ ಬಾಂಗ್ಲಾ ಪ್ರವಾಸ ಕೈಗೊಳ್ಳಬೇಕಿತ್ತು.
‘ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇವೆ. ಇಂತಹ ಪರಿಸ್ಥಿತಿಯಲ್ಲಿ ಸರಣಿಯನ್ನು ಆಯೋಜಿಸುವುದು ಸವಾಲಿನ ಕೆಲಸ. ಆಟಗಾರರು, ಸಹಾಯಕ ಸಿಬ್ಬಂದಿ ಹಾಗೂ ಪಂದ್ಯದ ಅಧಿಕಾರಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆಗಸ್ಟ್‌ನಲ್ಲಿ ನಿಗದಿಯಾಗಿದ್ದ ಸರಣಿಯನ್ನು ಮುಂದಕ್ಕೆ ಹಾಕಲು ನಿರ್ಧರಿಸಿದ್ದೇವೆ’ ಎಂದು ಬಿಸಿಬಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನಿಜಾಮುದ್ದೀನ್ ಚೌಧರಿ ತಿಳಿಸಿದ್ದಾರೆ.
‘ನ್ಯೂಜಿಲೆಂಡ್ ಕ್ರಿಕೆಟ್ (ಎನ್‌ಜೆಡ್‌ಸಿ) ಸಂಸ್ಥೆಯ ಜೊತೆ ಚರ್ಚಿಸಿಯೇ ಈ ತೀರ್ಮಾನ ಕೈಗೊಂಡಿದ್ದೇವೆ. ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುತ್ತೇವೆ’ ಎಂದೂ ಅವರು ನುಡಿದಿದ್ದಾರೆ.
ಬಾಂಗ್ಲಾದೇಶದ ಹಿರಿಯ ಆಟಗಾರರಾದ ಮಷ್ರಫೆ ಮೊರ್ತಜಾ, ನಜಮುಲ್ ಇಸ್ಲಾಂ ಹಾಗೂ ನಫೀಸ್ ಇಕ್ಬಾಲ್ ಅವರಿಗೆ ಕೋವಿಡ್–19 ಇರುವುದು ಖಾತರಿಯಾಗಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.