ಶನಿವಾರ, ಮೇ 21, 2022
28 °C

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲಿರುವ ರಾಸ್ ಟೇಲರ್

ರಾಯಿಟರ್ಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ನ್ಯೂಜಿಲೆಂಡ್‌ ತಂಡದ ಖ್ಯಾತ ಬ್ಯಾಟ್ಸ್‌ಮನ್ ರಾಸ್ ಟೇಲರ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಎರಡು ಪಂದ್ಯಗಳ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದಲಿದ್ದಾರೆ. ಆಸ್ಟ್ರೇಲಿಯಾ ಮತ್ತು ನೆದರ್ಲೆಂಡ್ ವಿರುದ್ಧ ತಮ್ಮ ಕೊನೆಯ ಸೀಮಿತ ಓವರ್‌ಗಳ ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಲಿದ್ದಾರೆ.

37 ವರ್ಷದ ಕಿವೀಸ್ ಕ್ರಿಕೆಟಿಗ ರಾಸ್ ಟೇಲರ್, 2007 ರಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಬಳಿಕ ನ್ಯೂಜಿಲೆಂಡ್ ತಂಡದ ಮುಖ್ಯ ಆಧಾರವಾಗಿದ್ದಾರೆ, 100 ಟೆಸ್ಟ್‌ ಪಂದ್ಯಗಳನ್ನು ಆಡಿದ ನಾಲ್ಕು ನ್ಯೂಜಿಲೆಂಡ್‌ ಆಟಗಾರರರಲ್ಲಿ ಒಬ್ಬರಾಗಿದ್ದು, 110 ಟೆಸ್ಟ್ ಕ್ರಿಕೆಟ್ ಪಂದ್ಯಗಳಲ್ಲಿ 44.87ರ ಸರಾಸರಿಯಲ್ಲಿ ಅವರು 7,584 ರನ್ ಗಳಿಸಿದ್ದಾರೆ.

ಏಕದಿನ ಅಂತರಾಷ್ಟ್ರೀಯ ಪಂದ್ಯಗಳಲ್ಲಿ 8,581 ರನ್ ಸಿಡಿಸಿದ್ದು, 21 ಶತಕ ದಾಖಲಿಸಿದ್ದಾರೆ. ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ 100 ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಆಡಿದ ವಿಶ್ವದ ಮೊದಲ ಆಟಗಾರರಾಗಿದ್ದಾರೆ.

‘ಇದು ಅದ್ಭುತ ಪ್ರಯಾಣವಾಗಿದೆ. ದೇಶದ ಮತ್ತು ಎದುರಾಳಿ ತಂಡದ ಶ್ರೇಷ್ಠ ಆಟಗಾರರ ಜೊತೆ ಆಡಿದ್ದು ನನ್ನ ಅದೃಷ್ಟ ಎಂದು ಭಾವಿಸುತ್ತೇನೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

'ಆದರೆ ಎಲ್ಲಾ ಒಳ್ಳೆಯ ವಿಷಯಗಳು ಕೊನೆಗೊಳ್ಳಬೇಕು ಮತ್ತು ಈ ಸಮಯವು ನನಗೆ ಸರಿಯಾಗಿದೆ' ಎಂದಿದ್ಧಾರೆ

ಈ ವರ್ಷ ಸೌತಾಂಪ್ಟನ್‌ನಲ್ಲಿ ನಡೆದ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ತಂಡವು ಭಾರತವನ್ನು ಸೋಲಿಸಿದಾಗ ಟೇಲರ್ ಉತ್ತಮ ಆಟ ಪ್ರದರ್ಶಿಸಿದ್ದರು. ಆದರೆ, ಭಾರತ ವಿರುದ್ಧದ ಇತ್ತೀಚಿನ ಸರಣಿಯಲ್ಲಿ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಕೇವಲ 11 ರನ್‌ ಗಳಿಸಿದ್ದರು.

ನ್ಯೂಜಿಲೆಂಡ್‌ನ ಶ್ರೇಷ್ಠ ಆಟಗಾರರಲ್ಲಿ ಒಬ್ಬರಾದ ಟೇಲರ್ ಕ್ರಿಕೆಟ್‌ಗೆ ವಿದಾಯ ಹೇಳಲಿದ್ದಾರೆ ಎಂದು ಕೋಚ್ ಗ್ಯಾರಿ ಸ್ಟೆಡ್ ಸಹ ತಿಳಿಸಿದ್ದಾರೆ.

‘ಬ್ಯಾಟ್ಸ್‌ಮನ್ ಆಗಿ ಅವರ ಕೌಶಲ್ಯ ಮತ್ತು ಮನೋಧರ್ಮವು ವಿಶ್ವ ದರ್ಜೆಯದ್ದಾಗಿದೆ. ಇಷ್ಟು ದಿನ ಅಂತಹ ಉನ್ನತ ಮಟ್ಟದಲ್ಲಿ ಪ್ರದರ್ಶನ ನೀಡಿದ ಅವರ ಸಾಮರ್ಥ್ಯವು ವೃತ್ತಿಪರತೆಯನ್ನು ತೋರಿಸುತ್ತದೆ. ಅವರ ಅನುಭವವು ಹಲವು ಬಾರಿ ತಂಡಕ್ಕೆ ನೆರವಾಗಿದೆ’ ಎಂದು ಅವರು ಹೇಳಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು