ಶನಿವಾರ, ನವೆಂಬರ್ 26, 2022
19 °C

NZ v IND ODI: ಶಿಖರ್ –ಶ್ರೇಯಸ್ ಭರ್ಜರಿ ಬ್ಯಾಟಿಂಗ್, ಕಿವೀಸ್‌ಗೆ 307 ರನ್ ಗುರಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಆಕ್ಲೆಂಡ್: ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ಬೃಹತ್ ಮೊತ್ತ ಪೇರಿಸಿದೆ. 

ಟಾಸ್‌ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 7 ವಿಕೆಟ್‌ ಕಳೆದುಕೊಂಡು 306 ರನ್ ಗಳಿಸಿದೆ. 

ಭಾರತದ ಪರ ಶ್ರೇಯಸ್ ಅಯ್ಯರ್ 80, ಶಿಖರ್ ಧವನ್ 72, ಶುಭಮನ್ ಗಿಲ್ 50, ಸಂಜು ಸ್ಯಾಮ್ಸನ್ 36, ವಾಷಿಂಗ್ಟನ್ ಸುಂದರ್ ಔಟಾಗದೆ 37 ರನ್ ಗಳಿಸಿ ತಂಡಕ್ಕೆ ಆಸರೆಯಾದರು. 

ಕಿವೀಸ್ ಪರ ಟಿಮ್ ಸೌಥಿ, ಲಾಕಿ ಫರ್ಗ್ಯುಸನ್ ತಲಾ ಮೂರು ಹಾಗೂ ಆ್ಯಡಂ ಮಿಲ್ನೆ ಒಂದು ವಿಕೆಟ್ ಪಡೆದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು