ಮಂಗಳವಾರ, ಮಾರ್ಚ್ 2, 2021
31 °C

ಟಿ–20 ಕ್ರಿಕೆಟ್‌: ಕಿವೀಸ್‌ ವಿರುದ್ಧ ಟಾಸ್‌ ಗೆದ್ದ ಭಾರತ – ಬೌಲಿಂಗ್‌ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹ್ಯಾಮಿಲ್ಟನ್: ಇಲ್ಲಿನ ಸೆಡನ್ ಪಾರ್ಕ್‌ನಲ್ಲಿ ಭಾನುವಾರ ನಡೆಯಲಿರುವ ನ್ಯೂಜಿಲೆಂಡ್‌ ವಿರುದ್ಧದ ಮೂರನೇ ಟ್ವಿಂಟಿ–20 ಪಂದ್ಯದಲ್ಲಿ ಭಾರತ ಟಾಸ್‌ ಗೆದ್ದು ಬೌಲಿಂಗ್‌ ಆಯ್ಕೆ ಮಾಡಿಕೊಂಡಿದೆ. 

ಮೂರು ಪಂದ್ಯಗಳ ಟಿ–20 ಸರಣಿಯಲ್ಲಿ ಉಭಯ ತಂಡಗಳು 1–1ರಲ್ಲಿ ಮುನ್ನಡೆ ಸಾಧಿಸಿವೆ. ಈ ಪಂದ್ಯದಲ್ಲಿ ಭಾರತವು ಗೆದ್ದರೆ ಮತ್ತೊಂದು ಇತಿಹಾಸ ರಚನೆಯಾಗಲಿದೆ. ಕಿವೀಸ್ ನಾಡಿನಲ್ಲಿ ಮೊದಲ ಸಲ ಟ್ವೆಂಟಿ–20 ಕ್ರಿಕೆಟ್ ಸರಣಿ ಜಯಿಸಿದ ಹೆಗ್ಗಳಿಕೆಗೆ ರೋಹಿತ್ ಶರ್ಮಾ ಬಳಗವು ಪಾತ್ರವಾಗಲಿದೆ.

ತಂಡಗಳು: ಭಾರತ: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಕೇದಾರ್ ಜಾಧವ್, ಮಹೇಂದ್ರಸಿಂಗ್ ಧೋನಿ, ಕೃಣಾಲ್ ಪಾಂಡ್ಯ, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಸಿದ್ಧಾರ್ಥ್ ಕೌಲ್, ಖಲೀಲ್ ಅಹಮದ್, ಶುಭಮನ್ ಗಿಲ್, ವಿಜಯಶಂಕರ್, ಹಾರ್ದಿಕ್ ಪಾಂಡ್ಯ, ಮೊಹಮ್ಮದ್ ಸಿರಾಜ್.

ನ್ಯೂಜಿಲೆಂಡ್: ಕೇನ್ ವಿಲಿಯಮ್ಸನ್ (ನಾಯಕ), ಡಫ್ ಬ್ರೇಸ್‌ವೆಲ್, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಲಾಕಿ ಫರ್ಗ್ಯುಸನ್, ಸ್ಕಾಟ್ ಕಗೆಲಿನ್, ಕಾಲಿನ್ ಮನ್ರೊ, ಡೆರಿಲ್ ಮಿಚೆಲ್, ಮಿಚೆಲ್ ಸ್ಯಾಂಟನರ್, ಟಿಮ್ ಸೀಫರ್ಟ್, ಈಶ್ ಸೋಧಿ, ಟಿಮ್ ಸೌಥಿ, ರಾಸ್ ಟೇಲರ್, ಬ್ಲೇರ್ ಟಿಕ್ನರ್, ಜೇಮ್ಸ್ ನೀಶಾಮ್‌

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು