ಸ್ಮೃತಿ ಮಂದಾನ ಶತಕ: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ಜಯ

7

ಸ್ಮೃತಿ ಮಂದಾನ ಶತಕ: ನ್ಯೂಜಿಲೆಂಡ್‌ ವಿರುದ್ಧ ಭಾರತಕ್ಕೆ ಜಯ

Published:
Updated:

ನೇಪಿಯರ್‌: ಇಲ್ಲಿನ ನಡೆದ ನ್ಯೂಜಿಲೆಂಡ್‌ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಸ್ಮೃತಿ ಮಂದಾನ ಅವರ ಶತಕದ ಬಲದಿಂದ ಭಾರತ 9 ವಿಕೆಟ್‌ಗಳ ಗೆಲುವು ಸಾಧಿಸಿದೆ. 

ಭಾರತದ ಎದುರು ಮೊದಲು ಬ್ಯಾಟಿಂಗ್‌ ಮಾಡಿದ ಕೀವಿಸ್‌, ಏಕ್ತಾ ಬಿಷ್ಠ್ ಹಾಗೂ ಪೂನಂ ಯಾದವ್‌ ಅವರ ಮಾರಕ ಬೌಲಿಂಗ್‌ ದಾಳಿಗೆ ತತ್ತರಿಸಿ 48.4 ಓವರ್‌ಗಳಲ್ಲಿ 192 ರನ್‌ ಗಳಿಸಿ ಆಲೌಟ್‌ ಆಗಿತ್ತು. 

ಈ ಗುರಿ ಬೆನ್ನತ್ತಿದ ಮಿಥಾಲಿ ಪಡೆ, ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ (105), ಜೆಮಿಮಾ ರೊಡ್ರಿಗಸ್ (81*)  ಅವರ ಉತ್ತಮ ಜೊತೆಯಾಟದ ನೆರವಿನಿಂದ 33 ಓವರ್‌ಗಳಲ್ಲಿ ಗೆಲುವಿನ ನಗೆ ಬೀರಿತು. 

ಈ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ 1–0ರಲ್ಲಿ ಮುನ್ನಡೆ ಸಾಧಿಸಿತು. ಉತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರಿದ ಸ್ಮೃತಿ ಮಂದಾನ ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. 

ಬರಹ ಇಷ್ಟವಾಯಿತೆ?

 • 15

  Happy
 • 2

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !