ಭಾನುವಾರ, ಮಾರ್ಚ್ 7, 2021
22 °C

ಕ್ರಿಕೆಟ್‌: ಭಾರತ ವಿರುದ್ಧ ಟಾಸ್‌ ಗೆದ್ದ ಕಿವೀಸ್‌ ಮಹಿಳಾ ತಂಡ–ಬ್ಯಾಟಿಂಗ್‌ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹ್ಯಾಮಿಲ್ಟನ್‌: ಇಲ್ಲಿನ ನಡೆಯುತ್ತಿರುವ ಭಾರತ ವಿರುದ್ಧದ ಮೂರನೇ ಟಿ–20 ಪಂದ್ಯದಲ್ಲಿ ಟಾಸ್‌ ಗೆದ್ದಿರುವ ನ್ಯೂಜಿಲೆಂಡ್‌ ತಂಡ ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡಿದೆ. 

ಈಗಾಗಲೇ ಸರಣಿ ಸೋತಿರುವ ಭಾರತ ಮಹಿಳಾ ತಂಡ ನ್ಯೂಜಿಲೆಂಡ್‌ ಎದುರಿನ ಅಂತಿಮ ಟ್ವೆಂಟಿ–20 ‍ಪಂದ್ಯದಲ್ಲಿ ಗೆದ್ದು ಗೌರವ ಉಳಿಸಿಕೊಳ್ಳುವ ವಿಶ್ವಾಸದಲ್ಲಿದೆ.

ಸರಣಿ ಗೆದ್ದು ಬೀಗುತ್ತಿರುವ ನ್ಯೂಜಿಲೆಂಡ್‌ ವನಿತೆಯರು, ಅಂತಿಮ ಪಂದ್ಯದಲ್ಲೂ ಪ್ರವಾಸಿ ಪಡೆಯನ್ನು ಮಣಿಸಿ ‘ಕ್ಲೀನ್‌ ಸ್ವೀಪ್‌’ ಸಾಧನೆ ಮಾಡುವ ಹಂಬಲದಲ್ಲಿದ್ದಾರೆ.

ಸೋಫಿ ಡಿವೈನ್‌, ಸೂಝಿ ಬೇಟ್ಸ್‌, ಆ್ಯಮಿ ಸಟ್‌ವರ್ಥ್‌ವೇಟ್‌ ಮತ್ತು ಕೇಟಿ ಮಾರ್ಟಿನ್‌ ಅವರು ಬ್ಯಾಟಿಂಗ್‌ನಲ್ಲಿ ಈ ತಂಡದ ಶಕ್ತಿಯಾಗಿದ್ದಾರೆ. ಬೌಲಿಂಗ್‌ನಲ್ಲೂ ತಂಡ ಬಲಿಷ್ಠವಾಗಿದೆ.

2–1ರಿಂದ ಏಕದಿನ ಸರಣಿ ಜಯಿಸಿದ್ದ ಹರ್ಮನ್‌ಪ್ರೀತ್‌ ಕೌರ್‌ ಬಳಗ ಚುಟುಕು ಮಾದರಿಯ ಮೊದಲ ಎರಡು ಪಂದ್ಯಗಳಲ್ಲಿ ನಿರಾಸೆ ಕಂಡಿತ್ತು. 2020ರ ಐಸಿಸಿ ವಿಶ್ವ ಟ್ವೆಂಟಿ–20 ಟೂರ್ನಿಗೆ ಬಲಿಷ್ಠ ತಂಡ ಕಟ್ಟುವ ಉದ್ದೇಶದಿಂದ ತಂಡದ ಆಡಳಿತ ಮಂಡಳಿ ಅನುಭವಿ ಆಟಗಾರ್ತಿ ಮಿಥಾಲಿ ರಾಜ್‌ ಅವರನ್ನು ಹೊರಗಿಟ್ಟು ಯುವ ಆಟಗಾರ್ತಿಯರಿಗೆ ಅವಕಾಶ ನೀಡಿತ್ತು. ಈ ಯೋಜನೆ ಎರಡೂ ಪಂದ್ಯಗಳಲ್ಲೂ ಕೈಕೊಟ್ಟಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು