ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂದಿನ ಮೂರು ದಿನಗಳ ಗುಣಮಟ್ಟದ ತರಬೇತಿ ನಿರ್ಣಾಯಕ: ದ್ರಾವಿಡ್

Last Updated 20 ಡಿಸೆಂಬರ್ 2021, 7:00 IST
ಅಕ್ಷರ ಗಾತ್ರ

ಸೆಂಚುರಿಯನ್: ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿರುವ ಟೀಮ್ ಇಂಡಿಯಾ ಆಟಗಾರರಿಗೆ ಮುಂದಿನ ಮೂರು ದಿನಗಳ ಗುಣಮಟ್ಟದ ತರಬೇತಿ ನಿರ್ಣಾಯಕವಾಗಿರಲಿದೆ ಎಂದು ಭಾರತ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.

ದಕ್ಷಿಣ ಆಫ್ರಿಕಾ ಪ್ರವಾಸ ಬೆಳೆಸಿರುವ ವಿರಾಟ್ ಕೊಹ್ಲಿ ನೇತೃತ್ವದ ಟೀಮ್ ಇಂಡಿಯಾವು ಆರಂಭದಲ್ಲಿ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲಿದೆ. ಡಿಸೆಂಬರ್ 26ರಂದು ಸೆಂಚುರಿಯನ್‌ನಲ್ಲಿ ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದೆ. \

ಈ ನಡುವೆ ಗುಣಮಟ್ಟದ ತರಬೇತಿಯ ಅಗತ್ಯದ ಬಗ್ಗೆ ಕೋಚ್ ದ್ರಾವಿಡ್ ಪ್ರತಿಪಾದಿಸಿದ್ದಾರೆ.'ಮೊದಲ ಟೆಸ್ಟ್ ಪಂದ್ಯಕ್ಕೆ ಸಿದ್ದರಾಗುವ ನಿಟ್ಟಿನಲ್ಲಿ ಮುಂದಿನ ಮೂರು ದಿನಗಳ ಗುಣಮಟ್ಟದ ತರಬೇತಿಯು ಅತಿ ಮುಖ್ಯವೆನಿಸುತ್ತದೆ' ಎಂದು ಹೇಳಿದ್ದಾರೆ.

ತಂಡದ ಎಲ್ಲ ಆಟಗಾರರು ಕಠಿಣ ತರಬೇತಿಯಲ್ಲಿ ಭಾಗವಹಿಸಿದ್ದಾರೆ. ಈ ಸಂದರ್ಭದಲ್ಲಿ ನಾಯಕ ವಿರಾಟ್ ಕೊಹ್ಲಿ ಅವರಿಗೂ ದ್ರಾವಿಡ್ ಸಲಹೆ ನೀಡುತ್ತಿರುವ ದೃಶ್ಯ ಕಂಡುಬಂತು.

ಗಾಯದ ಸಮಸ್ಯೆಯಿಂದಾಗಿ ರೋಹಿತ್ ಶರ್ಮಾ ಟೆಸ್ಟ್ ಸರಣಿಗೆ ಅಲಭ್ಯರಾಗಿದ್ದಾರೆ. ಬಳಿಕ ನಡೆಯಲಿರುವ ಏಕದಿನ ಸರಣಿಯ ವೇಳೆ ತಂಡವನ್ನು ಮುನ್ನಡೆಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT