ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಸ್ಟ್ರೇಲಿಯಾ ಎದುರಿನ ಟೆಸ್ಟ್ ಸರಣಿ: ವೈಫಲ್ಯದ ನಡುವೆಯೂ ಸ್ಥಾನ ಉಳಿಸಿಕೊಂಡ ರಾಹುಲ್

Last Updated 19 ಫೆಬ್ರುವರಿ 2023, 16:31 IST
ಅಕ್ಷರ ಗಾತ್ರ

ನವದೆಹಲಿ: ಸತತ ವೈಫಲ್ಯ ಅನುಭವಿಸುತ್ತಿರುವ ಬ್ಯಾಟರ್ ಕೆ.ಎಲ್. ರಾಹುಲ್ ಅವರನ್ನು ಆಸ್ಟ್ರೇಲಿಯಾ ಎದುರಿನ ಸರಣಿಯ ಉಳಿದೆರಡು ಟೆಸ್ಟ್‌ಗಳಿಗೂ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ.

ಭಾನುವಾರ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಆಯ್ಕೆ ಸಮಿತಿಯು ಭಾನುವಾರ ಆಸ್ಟ್ರೇಲಿಯಾ ಎದುರಿನ ಎರಡು ಟೆಸ್ಟ್ ಹಾಗೂ ಏಕದಿನ ಸರಣಿಗಾಗಿ ತಂಡವನ್ನು ಪ್ರಕಟಿಸಿದೆ.

ಮೊದಲೆರಡು ಟೆಸ್ಟ್‌ಗಳಲ್ಲಿ ಆಡಿರುವ ಬಹುತೇಕ ಆಟಗಾರರು ಸ್ಥಾನ ಉಳಿಸಿಕೊಂಡಿದ್ದಾರೆ.

ಏಕದಿನ ತಂಡದಲ್ಲಿಯೂ ರಾಹುಲ್ ಇದ್ದಾರೆ. ಹಾರ್ದಿಕ್ ಪಾಂಡ್ಯ ಉಪನಾಯಕರಾಗಿದ್ದಾರೆ. ರಣಜಿ ಟ್ರೋಫಿ ಜಯಿಸಿದ ಸೌರಾಷ್ಟ್ರ ತಂಡದ ನಾಯಕ ಜೈದೇವ್ ಉನದ್ಕತ್ ಅವರನ್ನೂ ಎರಡೂ ತಂಡಗಳಿಗೆ ಆಯ್ಕೆ ಮಾಡಲಾಗಿದೆ.

ತಂಡಗಳು
ಟೆಸ್ಟ್:
ರೋಹಿತ್ ಶರ್ಮಾ (ನಾಯಕ), ಕೆ.ಎಲ್. ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆ.ಎಸ್. ಭರತ್ (ವಿಕೆಟ್‌ಕೀಪರ್), ಇಶಾನ್ ಕಿಶನ್ (ವಿಕೆಟ್‌ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜೈದೇವ್ ಉನದ್ಕತ್.

ಏಕದಿನ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆ.ಎಲ್. ರಾಹುಲ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ (ಉಪನಾಯಕ), ರವೀಂದ್ರ ಜಡೇಜ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜೈದೇವ್ ಉನದ್ಕತ್.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT