ಶನಿವಾರ, ಜೂನ್ 6, 2020
27 °C

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ವಾಗ್ದಾನ ಮಾಡಿಲ್ಲ: ಧುಮಾಲ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ : ದಕ್ಷಿಣ ಆಫ್ರಿಕಾಕ್ಕೆ ಆಗಸ್ಟ್‌ನಲ್ಲಿ ಪ್ರವಾಸ ಮಾಡುವ ಕುರಿತು ನಾವಿನ್ನೂ ಯಾವುದೇ ರೀತಿಯ ವಾಗ್ದಾನ ಮಾಡಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಖಜಾಂಚಿ ಅರುಣ್ ಧುಮಾಲ್ ಹೇಳಿದ್ದಾರೆ.

‘ಭಾರತ ತಂಡವು ಆಗಸ್ಟ್‌ನಲ್ಲಿ ಇಲ್ಲಿಗೆ ಬರಲು ಒಪ್ಪಿದೆ’ ಎಂದು  ಕ್ರಿಕೆಟ್ ದಕ್ಷಿಣ ಆಫ್ರಿಕಾದ ನಿರ್ದೇಶಕ ಗ್ರೆಮ್ ಸ್ಮಿತ್ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಾಕಸ್ ಫಾಲ್ ಗುರುವಾರ ಹೇಳಿದ್ದರು.

ಈ ಕುರಿತು ಶುಕ್ರವಾರ ಪ್ರತಿಕ್ರಿಯಿಸಿರುವ ಧುಮಾಲ್, ‘ ಈ ಹಿಂದೆ ದಕ್ಷಿಣ ಆಫ್ರಿಕಾ ತಂಡವು ಭಾರತದಲ್ಲಿ ಆಡುವ ಸರಣಿಯು ರದ್ದುಗೊಂಡಾಗ ಚರ್ಚೆ ನಡೆದಿತ್ತು. ಆಗಸ್ಟ್‌ನಲ್ಲಿ ನಮ್ಮ ತಂಡವು ಪ್ರವಾಸ ಕೈಗೊಳ್ಳುವ ಬಗ್ಗೆ ಸ್ಥಿತಿಗತಿಯನ್ನು ನೋಡಿಕೊಂಡು ಪ್ರಯತ್ನಿಸಲಾಗುವುದೆಂದು ಹೇಳಿದ್ದೆವು. ಆದರೆ ಇದುವರೆಗೆ ನಾವು ಯಾವುದೇ ರೀತಿಯ ತೀರ್ಮಾನ ಕೈಗೊಂಡಿಲ್ಲ’ ಎಂದಿದ್ದಾರೆ.

‘ಸದ್ಯದ ಪರಿಸ್ಥಿತಿಯಲ್ಲಿ ಏನೂ ನಿರ್ಧಾರ ಕೈಗೊಳ್ಳಲು ಸಾಧ್ಯವಿಲ್ಲ. ಜುಲೈನಲ್ಲಿ ಶ್ರೀಲಂಕಾದಲ್ಲಿ ಟಿ20 ಸರಣಿಗಾಗಿ ಪ್ರವಾಸ ಮತ್ತು ಅದರ ನಂತರ ಜಿಂಬಾಬ್ವೆ ಪ್ರವಾಸದ ಬಗ್ಗೆಯೂ ಖಚಿತ ನಿರ್ಧಾರ ಮಾಡಿಲ್ಲ. ಆದರೆ ಆಗಸ್ಟ್‌ನ  ದಕ್ಷಿಣ ಆಫ್ರಿಕಾ ಪ್ರವಾಸ ಬಗ್ಗೆ ಹೇಗೆ ಹೇಳುವುದು’ ಎಂದು ಪ್ರಶ್ನಿಸಿದ್ದಾರೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು