ಭಾನುವಾರ, ಮೇ 16, 2021
22 °C

ಐಪಿಎಲ್‌: ಶನಿವಾರ ಒಂದೇ ಪಂದ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿಯಲ್ಲಿ ಈ ಬಾರಿ ಶನಿವಾರ ಒಂದೇ ಪಂದ್ಯ ಇರುತ್ತದೆ. ಭಾನುವಾರ ಮಾತ್ರ ಎರಡು ಪಂದ್ಯಗಳು ನಡೆಯಲಿವೆ. 

ಕಳೆದ ಬಾರಿಯ ಚಾಂಪಿಯನ್‌ ಮುಂಬೈ ಇಂಡಿಯನ್ಸ್ ಮತ್ತು ರನ್ನರ್ ಅಪ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮೊದಲ ಪಂದ್ಯದಲ್ಲಿ ಸೆಣಸಲಿವೆ. ಈ ಪಂದ್ಯ ಮಾರ್ಚ್ 29ರ ಭಾನುವಾರ ಮುಂಬೈಯ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಟೂರ್ನಿಯ ಲೀಗ್ ಪಂದ್ಯಗಳ ವೇಳಾಪಟ್ಟಿಯನ್ನಷ್ಟೇ ಐಪಿಎಲ್ ಆಡಳಿತ ಬಿಡುಗಡೆ ಮಾಡಿದೆ. ಆದರೆ ಫೈನಲ್ ಪಂದ್ಯ ಮೇ 24ರಂದು ನಡೆಯುವುದು ಖಚಿತವಾಗಿದೆ. ಕಳೆದ ಬಾರಿ ಮೇ 12ರಂದು ಹೈದರಾಬಾದ್‌ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಸಿಎಸ್‌ಕೆ ವಿರುದ್ಧ ಮುಂಬೈ ಇಂಡಿಯನ್ಸ್ ಒಂದು ರನ್‌ ಅಂತರದ ಗೆಲುವು ದಾಖಲಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು