ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ ಬಾಂಗ್ಲಾದಲ್ಲಿ ಪಾಕ್ ಪಂದ್ಯಗಳ ಆಯೋಜನೆ ಇಲ್ಲ’

Last Updated 29 ಮಾರ್ಚ್ 2023, 17:08 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಇದೇ ವರ್ಷ ಭಾರತದಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ತಂಡವು ತನ್ನ ಪಾಲಿನ ಪಂದ್ಯಗಳನ್ನು ಬಾಂಗ್ಲಾದೇಶದಲ್ಲಿ ಆಡುವುದಿಲ್ಲ. ಈ ಬಗ್ಗೆ ಸಭೆಯಲ್ಲಿ ಯಾವುದೇ ಮಾತುಕತೆ ಆಗಿಲ್ಲ ಎಂದು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಸ್ಪಷ್ಟಪಡಿಸಿದೆ.

ಈ ಬಾರಿ ಪಾಕಿಸ್ತಾನದ ಆತಿಥ್ಯದಲ್ಲಿ ಏಷ್ಯಾ ಕಪ್ ಟೂರ್ನಿ ನಡೆಯಲಿದೆ. ಅದರಲ್ಲಿ ಆಡಲು ಪಾಕಿಸ್ತಾನಕ್ಕೆ ಹೋಗುವ ಮಾತೇ ಇಲ್ಲ ಎಂದು ಈಚೆಗೆ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದರು. ಅದಕ್ಕೆ ಪ್ರತಿಕ್ರಿಯೆಯಾಗಿ ವಿಶ್ವಕಪ್‌ನಲ್ಲಿ ಆಡಲು ಭಾರತಕ್ಕೆ ತೆರಳುವುದಿಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯು ಹೇಳಿತ್ತು.

‘ಪಿಸಿಬಿ ಮುಖ್ಯಸ್ಥ ನಜಾಮ್ ಸೇಥಿ ಮತ್ತು ಬಾಂಗ್ಲಾದೇಶ ಮಂಡಳಿಯ ನಜ್ಮುಲ್ ಹಸನ್ ಪಪೊನ್ ಅವರಿಬ್ಬರು ಭೇಟಿಯಾಗಿ ಮಾತನಾಡಿದ್ದರು. ಆದರೆ ಅದು ಅಧಿಕೃತವಾದ ಚರ್ಚೆಯಾಗಿರಲಿಲ್ಲ. ಅದರಲ್ಲಿ ಪಾಕ್ ತಂಡವು ಬಾಂಗ್ಲಾದೇಶದಲ್ಲಿ ಆಡುವ ಕುರಿತು ಯಾವುದೇ ಪ್ರಸ್ತಾವ ಇರಲಿಲ್ಲ’ ಎಂದೂ ಐಸಿಸಿ ಸ್ಪಷ್ಟಪಡಿಸಿದೆ.

‘ವಿಶ್ವಕಪ್ ಟೂರ್ನಿಯಲ್ಲಿ ಆಡಲು ಭಾರತಕ್ಕೆ ಪ್ರವಾಸ ಮಾಡುವ ಎಲ್ಲ ತಂಡಗಳಿಗೂ ವೀಸಾ ವ್ಯವಸ್ಥೆ ಮಾಡುವುದಾಗಿ ಬಿಸಿಸಿಐ ಈಗಾಗಲೇ ಸ್ಪಷ್ಟಪಡಿಸಿದೆ. ಒಂದೊಮ್ಮೆ ಪಾಕಿಸ್ತಾನ ತಂಡವು ಸೆಮಿಫೈನಲ್‌ ಅಥವಾ ಫೈನಲ್‌ಗೆ ಪ್ರವೇಶಿಸಿದರೆ, ಬಾಂಗ್ಲಾದಲ್ಲಿ ಆಡಲು ಇಷ್ಟಪಡುವುದೇ. ಅದು ಅಸಂಬದ್ಧವಾಗಲಿದೆ’ ಎಂದು ಮಂಡಳಿಯ ಸದಸ್ಯರೊಬ್ಬರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT