ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದ್ರಾವಿಡ್ ಮುಖ್ಯ ಕೋಚ್ ಆಗಿ ಆಯ್ಕೆಯಾಗಿರುವುದು ಕೊಹ್ಲಿಗೆ ತಿಳಿದಿಲ್ಲವೇ?

Last Updated 17 ಅಕ್ಟೋಬರ್ 2021, 10:06 IST
ಅಕ್ಷರ ಗಾತ್ರ

ದುಬೈ: ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ಹುದ್ದೆಗೆ ರಾಹುಲ್ ದ್ರಾವಿಡ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯಾಗಿದೆ. ಆದರೆ ಈ ಕುರಿತು ಕೇಳಿದಾಗ ಏನಾಗುತ್ತಿದೆ ಎಂಬುದು ನಿಖರವಾಗಿ ತಿಳಿದಿಲ್ಲ ಎಂದು ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಉತ್ತರಿಸಿದ್ದಾರೆ.

ಪ್ರಸ್ತುತ ಮುಖ್ಯ ತರಬೇತುದಾರ ರವಿಶಾಸ್ತ್ರಿ ಅವರಕಾರ್ಯಾವಧಿಯು ಟ್ವೆಂಟಿ-20 ವಿಶ್ವಕಪ್ ಬಳಿಕ ಮುಕ್ತಾಯವಾಗಲಿದೆ. ಬಳಿಕಟೀಮ್ ಇಂಡಿಯಾದ ಮುಖ್ಯ ತರಬೇತುದಾರ ಹುದ್ದೆಯನ್ನು ವಹಿಸಲು ಬಿಸಿಸಿಐ ಮುಂದಿರಿಸಿರುವ ಪ್ರಸ್ತಾಪವನ್ನು ರಾಹುಲ್ ದ್ರಾವಿಡ್ ಒಪ್ಪಿಕೊಂಡಿದ್ದಾರೆ ಎಂಬುದು ವರದಿಯಾಗಿದೆ.

ಈ ಕುರಿತು ಕೇಳಿದಾಗ ಉತ್ತರಿಸಿರುವ ಕೊಹ್ಲಿ 'ಏನಾಗುತ್ತಿದೆ ಎಂದು ನಿಖರವಾಗಿ ತಿಳಿದಿಲ್ಲ. ಯಾರೊಂದಿಗೂಇನ್ನೂ ವಿವರವಾಗಿ ಚರ್ಚೆ ನಡೆಸಿಲ್ಲ' ಎಂದು ಹೇಳಿದ್ದಾರೆ.

ಯುಎಇ ಹಾಗೂ ಒಮಾನ್‌ನಲ್ಲಿ ಆರಂಭವಾಗಿರುವ ಟಿ20 ವಿಶ್ವಕಪ್‌ಗೂ ಮುಂಚಿತವಾಗಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿ ಪ್ರತಿಕ್ರಿಯಿಸಿದ್ದಾರೆ.

ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿರುವ ದ್ರಾವಿಡ್, ಅನೇಕ ಯುವ ಪ್ರತಿಭಾವಂತ ಆಟಗಾರರನ್ನು ಬೆಳೆಸಲು ಪ್ರಮುಖ ಪಾತ್ರ ವಹಿಸಿದ್ದಾರೆ. ಐಪಿಎಲ್ ಸಂದರ್ಭದಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಹಾಗೂ ಕಾರ್ಯದರ್ಶಿ ಜಯ್ ಶಾ ಮಾತುಕತೆ ನಡೆಸಿ ದ್ರಾವಿಡ್ ಅವರನ್ನು ಮನವೊಲಿಸಿದ್ದಾರೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT