ಭಾನುವಾರ, ಜೂನ್ 20, 2021
28 °C

ಕೊಲೆ ಪ್ರಕರಣ: ಸುಶೀಲ್‌ಕುಮಾರ್‌ಗೆ ಜಾಮೀನುರಹಿತ ವಾರಂಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ (ಪಿಟಿಐ): ಛತ್ರಸಾಲ ಕ್ರೀಡಾಂಗಣದಲ್ಲಿ ನಡೆದಿದ್ದ ಗಲಾಟೆ ಪ್ರಕರಣದಲ್ಲಿ ಭಾಗಿಯಾಗಿದ್ದರೆನ್ನಲಾದ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್  ಮತ್ತು ಆರು ಜನರಿಗೆ  ದೆಹಲಿ ನ್ಯಾಯಾಲಯವು ಶನಿವಾರ ಜಾಮೀನುರಹಿತ ವಾರಂಟ್‌ ಜಾರಿ ಮಾಡಿದೆ.

‘ಸುಶೀಲ್ ಮತ್ತು ಆರು ಜನರ ವಿರುದ್ಧ ಜಾಮೀನುರಹಿತ ವಾರಂಟ್ ಹೊರಡಿಸುವಂತೆ ನಾವು ಸಲ್ಲಿಸಿದ್ದ ಮನವಿಯನ್ನು ನ್ಯಾಯಾಲಯವು ಪುರಸ್ಕರಿಸಿದೆ. ನಿಯಮದ ಪ್ರಕಾರ ಕ್ರಮ ಜರುಗಿಸಲಾಗುವುದು‘ ಎಂದು ಹಿರಿಯ ಪೊಲೀಸ್ ಆಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈಚೆಗೆ  ಛತ್ರಸಾಲ ಕ್ರೀಡಾಂಗಣದಲ್ಲಿ ನಡೆದ ಗಲಾಟೆಯಲ್ಲಿ 23 ವರ್ಷದ ಕುಸ್ತಿಪಟು ಸಾಗರ್ ರಾಣಾ ಸಾವಿಗೀಡಾಗಿದ್ದರು. ಇದರಲ್ಲಿ ಸುಶೀಲ್ ಕುಮಾರ್ ಭಾಗಿಯಾಗಿದ್ದಾರೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಅವರು ನಾಪತ್ತೆಯಾಗಿದ್ದಾರೆ. ಪೊಲೀಸರು ಹೋದ ಸೋಮವಾರ ‘ಲುಕ್ ಔಟ್‌’ ನೋಟಿಸ್ ಹೊರಡಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು