ಶನಿವಾರ, ಮೇ 28, 2022
30 °C

ಆರ್‌ಸಿಬಿ ಟ್ರೋಫಿ ಗೆಲ್ಲುವವರೆಗೂ ಮದುವೆಯಾಗುವುದಿಲ್ಲ: ಯುವತಿಯ ಪೋಸ್ಟರ್ ವೈರಲ್!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಇತಿಹಾಸದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸ್ ಇದುವರೆಗೆ ಟ್ರೋಫಿ ಗೆದ್ದಿಲ್ಲ.

ಈ ನಡುವೆ ಆರ್‌ಸಿಬಿ ಟ್ರೋಫಿ ಗೆಲ್ಲುವವರೆಗೂ ಮದುವೆಯಾಗುವುದಿಲ್ಲ ಎಂದು ಯುವತಿಯೊಬ್ಬಳು ಪೋಸ್ಟರ್ ಪ್ರದರ್ಶಿಸಿರುವುದು ವೈರಲ್ ಆಗಿದೆ.

ಇದನ್ನೂ ಓದಿ: ವಿರಾಟ್ 71ನೇ ಶತಕದವರೆಗೂ ಡೇಟಿಂಗ್ ಮಾಡುವುದಿಲ್ಲ: ಆರ್‌ಸಿಬಿ ಫ್ಯಾನ್ ಗರ್ಲ್

ಆರ್‌ಸಿಬಿ ಹಾಗೂ ಮುಂಬೈ ಇಂಡಿಯನ್ಸ್ ನಡುವಣ ಪಂದ್ಯದಲ್ಲಿ ಈ ದೃಶ್ಯ ಕಂಡುಬಂತು. ಆರ್‌ಸಿಬಿ ಕಟ್ಟಾ ಅಭಿಮಾನಿಯಾಗಿರುವ ಯುವತಿ ಈ ಬಗ್ಗೆ ದೃಢ ನಿರ್ಧಾರ ತಳೆದಿದ್ದಾರೆ. ಅಭಿಮಾನಿಗಳಲ್ಲೂ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಯುವತಿಯ ಪೋಸ್ಟರ್ ಟ್ವೀಟ್ ಮಾಡಿರುವ ಕ್ರಿಕೆಟಿಗ ಅಮಿತ್ ಮಿಶ್ರಾ, ಯುವತಿಯ ಹೆತ್ತವರಿಗಾಗಿ ಅನುಕಂಪ ವ್ಯಕ್ತಪಡಿಸಿದ್ದಾರೆ.

 

 

ಐಪಿಎಲ್ 15ನೇ ಆವೃತ್ತಿಗೆ ಕಾಲಿಟ್ಟಿರುವಂತೆಯೇ ಆರ್‌ಸಿಬಿ ಇದುವರೆಗೆ ಟ್ರೋಫಿ ಗೆಲ್ಲದಿರುವುದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದೆ. ಮೂರು ಬಾರಿ ರನ್ನರ್-ಅಪ್ ಪ್ರಶಸ್ತಿ ಗೆದ್ದಿರುವುದು ತಂಡದ ಶ್ರೇಷ್ಠ ಸಾಧನೆಯಾಗಿದೆ.

 

ಐಪಿಎಲ್ ಆರಂಭಕ್ಕೂ ಮುನ್ನವೇ ವಿರಾಟ್ ಕೊಹ್ಲಿ ನಾಯಕ ಸ್ಥಾನ ತ್ಯಜಿಸಿದ್ದರು. ಪ್ರಸ್ತುತ ಫಫ್ ಡು ಪ್ಲೆಸಿ ನಾಯಕತ್ವದಲ್ಲಿ ಆರ್‌ಸಿಬಿ, ಚೊಚ್ಚಲ ಟ್ರೋಫಿ ಗೆಲ್ಲುವ ನಿರೀಕ್ಷೆಯಲ್ಲಿದೆ.

ಕೆಲವು ದಿನಗಳ ಹಿಂದೆಯಷ್ಟೇ ವಿರಾಟ್ ಕೊಹ್ಲಿ 71ನೇ ಶತಕದ ಮೈಲಿಗಲ್ಲು ತಲುಪವವರೆಗೂ ಡೇಟಿಂಗ್ ಮಾಡುವುದಿಲ್ಲ ಎಂದು ಯುವತಿಯೊಬ್ಬಳು ಪೋಸ್ಟರ್ ಪ್ರದರ್ಶಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು