ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿತಾಸಕ್ತಿ ಸಂಘರ್ಷ: ಕಪಿಲ್‌ಗೆ ನೋಟಿಸ್

Last Updated 28 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ನವದೆಹಲಿ: ಭಾರತ ತಂಡದ ಕೋಚ್‌ ಆಯ್ಕೆ ಮಾಡಿದ ಕಪಿಲ್‌ ದೇವ್ ನೇತೃತ್ವದ ಕ್ರಿಕೆಟ್ ಆಯ್ಕೆ ಸಮಿತಿಗೆ ಹಿತಾಸಕ್ತಿ ಸಂಘರ್ಷ ನಿಯಮ ಉಲ್ಲಂಘನೆ ನೋಟಿಸ್ ನೀಡಲಾಗಿದೆ.

ಸಮಿತಿಯಲ್ಲಿದ್ದ ಕಪಿಲ್‌ ದೇವ್, ಅನ್ಷುಮನ್ ಗಾಯಕವಾಡ್ ಮತ್ತು ಶಾಂತಾ ರಂಗಸ್ವಾಮಿ ಅವರಿಗೆ ನೀತಿ ಅಧಿಕಾರಿ ಡಿ.ಕೆ. ಜೈನ್ ನೋಟಿಸ್ ನೀಡಿದ್ದಾರೆಂದು ಬಿಸಿಸಿಐ ಮೂಲಗಳು ಸ್ಪಷ್ಟಪಡಿಸಿವೆ.ಮಧ್ಯಪ್ರದೇಶ ಕ್ರಿಕೆಟ್ ಸಂಸ್ಥೆಯ ಆಜೀವ ಸದಸ್ಯ ಸಂಜೀವ್ ಗುಪ್ತಾ ಅವರು ಈ ಮೂವರ ಮೇಲೆ ದೂರು ನೀಡಿದ್ದರು.

‘ಕಪಿಲ್ ದೇವ್ ಅವರು ಕ್ರಿಕೆಟ್ ವೀಕ್ಷಕ ವಿವರಣೆಗಾರರಾಗಿದ್ದಾರೆ. ಫ್ಲಡ್‌ಲೈಟ್ ಕಂಪನಿಯ ಮಾಲೀಕ ಮತ್ತು ಭಾರತೀಯ ಕ್ರಿಕೆಟಿಗರ ಸಂಸ್ಥೆಯ ಸದಸ್ಯರಾಗಿದ್ದಾರೆ. ಅನ್ಷುಮನ್ ಅವರು ಸ್ವಂತ ತರಬೇತಿ ಅಕಾಡೆಮಿ ಹೊಂದಿದ್ದಾರೆ. ಬಿಸಿಸಿಐ ಮಾನ್ಯತಾ ಸಮಿತಿಯ ಸದಸ್ಯರಾಗಿದ್ದಾರೆ. ಭಾರತ ಮಹಿಳಾ ಕ್ರಿಕೆಟ್ ತಂಡದ ಮಾಜಿ ನಾಯಕಿ ಶಾಂತಾ ಅವರು ಐಸಿಎನಲ್ಲಿದ್ದಾರೆ’ ಎಂದು ಗುಪ್ತಾ ದೂರಿದ್ದಾರೆ.

ಈಚೆಗೆ ಭಾರತ ತಂಡಕ್ಕೆ ರವಿಶಾಸ್ತ್ರಿ ಅವರನ್ನು ಮುಖ್ಯ ಕೋಚ್ ಆಗಿ ಕಪಿಲ್ ಸಮಿತಿಯು ಆಯ್ಕೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT