ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಕೋರಿ ಆ್ಯಂಡರ್ಸನ್ ವಿದಾಯ

Last Updated 5 ಡಿಸೆಂಬರ್ 2020, 13:53 IST
ಅಕ್ಷರ ಗಾತ್ರ

ಕ್ರೈಸ್ಟಚರ್ಚ್‌: ನ್ಯೂಜಿಲೆಂಡ್ ತಂಡದ ಆಲ್‌ರೌಂಡರ್‌, ಈ ಹಿಂದೆ ಏಕದಿನ ಪಂದ್ಯದಲ್ಲಿ ಅತಿ ವೇಗದ ಶತಕ ಗಳಿಸಿ ದಾಖಲೆ ಬರೆದಿದ್ದ ಕೋರಿ ಆ್ಯಂಡರ್ಸನ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಶನಿವಾರ ವಿದಾಯ ಹೇಳಿದ್ದಾರೆ. ಅಮೆರಿಕದ ಮೇಜರ್ ಲೀಗ್‌ ಕ್ರಿಕೆಟ್‌ನಲ್ಲಿ (ಎಂಎಲ್‌ಸಿ) ಆಡಲು ಮೂರು ವರ್ಷಗಳ ಒಪ್ಪಂದ ಮಾಡಿಕೊಂಡಿದ್ದಾರೆ.

ಆ್ಯಂಡರ್ಸನ್‌, ನ್ಯೂಜಿಲೆಂಡ್ ತಂಡದ ಪರ 13 ಟೆಸ್ಟ್, 49 ಏಕದಿನ ಹಾಗೂ 31 ಟ್ವೆಂಟಿ–20 ಪಂದ್ಯಗಳನ್ನು ಆಡಿದ್ದಾರೆ. ಆದರೆ ಕಳೆದ ಎರಡು ವರ್ಷಗಳಿಂದ ಅವರಿಗೆ ರಾಷ್ಟ್ರೀಯ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.

ಒಟ್ಟು 93 (ಮೂರೂ ಮಾದರಿ) ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಅವರು 2,277 ರನ್ ಗಳಿಸಿದ್ದಾರೆ. ಎರಡು ಶತಕ ಹಾಗೂ 10 ಅರ್ಧಶತಕಗಳು ಅದರಲ್ಲಿ ಸೇರಿವೆ. 90 ವಿಕೆಟ್‌ಗಳನ್ನೂ ಗಳಿಸಿದ್ದಾರೆ.

‘ನ್ಯೂಜಿಲೆಂಡ್‌ ತಂಡಕ್ಕಾಗಿ ಆಡಿದ್ದು ಅತ್ಯಂತ ಹೆಮ್ಮೆಯ ಸಂಗತಿ‘ ಎಂದು 36 ಎಸೆತಗಳಲ್ಲಿ ಶತಕ ಸಾಧನೆ ಮಾಡಿದ್ದ ಆ್ಯಂಡರ್ಸನ್‌ ಹೇಳಿದ್ದಾರೆ.

2014ರ ಜನವರಿ 1ರಂದು ವೆಸ್ಟ್‌ ಇಂಡೀಸ್‌ ವಿರುದ್ಧ ನಡೆದ ಹಣಾಹಣಿಯಲ್ಲಿ ಅವರು ಈ ದಾಖಲೆ ಮಾಡಿದ್ದರು. ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್ ಅವರು 2015ರ ಜನವರಿ 18ರಂದು ವೆಸ್ಟ್ ಇಂಡೀಸ್‌ ತಂಡದ ವಿರುದ್ಧವೇ 31 ಎಸೆತಗಳಲ್ಲಿ ಶತಕ ದಾಖಲಿಸುವ ಮೂಲಕ ಆ್ಯಂಡರ್ಸನ್ ಅವರ ದಾಖಲೆ ಮೀರಿದ್ದರು.

ಐಪಿಎಲ್ ಟೂರ್ನಿಯಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್, ಮುಂಬೈ ಇಂಡಿಯನ್ಸ್ ಹಾಗೂ ರಾಯಲ್‌ ಚಾಲೆಂಜರ್ಸ್ ಬೆಂಗಳೂರು ತಂಡಗಳಲ್ಲಿ ಕೋರಿ ಆ್ಯಂಡರ್ಸನ್‌ ಆಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT