ಬುಧವಾರ, ಆಗಸ್ಟ್ 12, 2020
26 °C

ಬ್ಯಾಟಿಂಗ್‌ ಕೋಚ್‌ ಹುದ್ದೆ ತೊರೆದ ಫುಲ್ಟನ್‌

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

Prajavani

ವೆಲ್ಲಿಂಗ್ಟನ್‌: ನ್ಯೂಜಿಲೆಂಡ್‌ ಕ್ರಿಕೆಟ್‌ ತಂಡದ ಬ್ಯಾಟಿಂಗ್‌ ಕೋಚ್‌ ಆಗಿದ್ದ ಪೀಟರ್‌ ಫುಲ್ಟನ್‌ ಅವರು ಈ ಹುದ್ದೆಯಿಂದ ಕೆಳಗಿಳಿದಿದ್ದಾರೆ.

‘ನ್ಯೂಜಿಲೆಂಡ್‌ನ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಆಡುವ ಕ್ಯಾಂಟರ್‌ಬರಿ ತಂಡದ ಮುಖ್ಯ ಕೋಚ್‌ ಆಗಲು ಅವರಿಗೆ ಆಹ್ವಾನ ನೀಡಲಾಗಿದೆ. ಹೀಗಾಗಿ ಬ್ಯಾಟಿಂಗ್‌ ಕೋಚ್‌ ಹುದ್ದೆ ತೊರೆಯಲು ತೀರ್ಮಾನಿಸಿದ್ದಾರೆ’ ಎಂದು ನ್ಯೂಜಿಲೆಂಡ್‌ ಕ್ರಿಕೆಟ್‌ (ಎನ್‌ಜೆಡ್‌ಸಿ) ಗುರುವಾರ ತಿಳಿಸಿದೆ.

‘ತಂಡವೊಂದರ ಮುಖ್ಯ ಕೋಚ್‌ ಆಗಬೇಕೆಂಬ ಬಯಕೆ ಇತ್ತು. ಅದು ಈಗ ಈಡೇರುತ್ತಿದೆ. ಕ್ರಿಕೆಟ್‌ನಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲು ಇದು ಸಹಕಾರಿಯಾಗಲಿದೆ’ ಎಂದು ಫುಲ್ಟನ್ ಹೇಳಿದ್ದಾರೆ.

‘‌ನನ್ನ ಪ್ರಾಂತ್ಯದ ತಂಡಕ್ಕೆ ಮಾರ್ಗದರ್ಶನ ನೀಡುವ ಅವಕಾಶ ಸಿಕ್ಕಿರುವುದಕ್ಕೆ ಅತೀವ ಖುಷಿಯಾಗಿದೆ. ಇನ್ನು ಮುಂದೆ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯಲೂ ಸಾಧ್ಯವಾಗಲಿದೆ’ ಎಂದಿದ್ದಾರೆ.

41 ವರ್ಷ ವಯಸ್ಸಿನ ಫುಲ್ಟನ್‌ ಅವರು ನ್ಯೂಜಿಲೆಂಡ್‌ ಪರ 23 ಟೆಸ್ಟ್‌, 49 ಏಕದಿನ ಹಾಗೂ 12 ಟ್ವೆಂಟಿ–20 ಪಂದ್ಯಗಳನ್ನು ಆಡಿ ಕ್ರಮವಾಗಿ 967, 1,334 ಮತ್ತು 127ರನ್‌ಗಳನ್ನು ಗಳಿಸಿದ್ದಾರೆ. ಆಗಸ್ಟ್‌ ಒಂದರಂದು ಅವರು ಕ್ಯಾಂಟರ್‌ಬರಿ ತಂಡವನ್ನು ಸೇರಿಕೊಳ್ಳಲಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು