ವೆಲ್ಲಿಂಗ್ಟನ್ : ‘ಪ್ರವಾಸಿ ಪಾಕಿಸ್ತಾನ ಕ್ರಿಕೆಟ್ ತಂಡದ ಮತ್ತೊಬ್ಬ ಸದಸ್ಯನಲ್ಲಿ ಕೋವಿಡ್–19 ದೃಢಪಟ್ಟಿದೆ. ಇದರಿಂದಾಗಿ ಒಟ್ಟು ಪ್ರಕರಣಗಳ ಸಂಖ್ಯೆ ಎಂಟಕ್ಕೇರಿದೆ‘ ಎಂದು ನ್ಯೂಜಿಲೆಂಡ್ ಸರ್ಕಾರ ಬುಧವಾರ ಹೇಳಿದೆ.

ಈಗಾಗಲೇ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿರುವ ಇತರ ಏಳು ಆಟಗಾರರು ಪ್ರತ್ಯೇಕವಾಸದಲ್ಲಿದ್ದು, ಈ ಸದಸ್ಯ ಅವರನ್ನು ಸೇರಿಕೊಳ್ಳಲಿದ್ದಾರೆ.

‘ಕ್ವಾರಂಟೈನ್ನಲ್ಲಿದ್ದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ಇರುವುದು ದೃಢಪಟ್ಟಿದೆ. ಇವರು ಪಾಕಿಸ್ತಾನ ಕ್ರಿಕೆಟ್ ತಂಡದ ಸದಸ್ಯರಾಗಿದ್ದಾರೆ‘ ಎಂದು ನ್ಯೂಜಿಲೆಂಡ್ ಆರೋಗ್ಯ ಸಚಿವಾಲಯ ಹೇಳಿದೆ.

54 ಸದಸ್ಯರ ತಂಡದಲ್ಲಿ ಮತ್ತೆ ಮೂರು ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಮೂಲಗಳು ಈ ಹಿಂದೆ ಹೇಳಿದ್ದವು. ಆದರೆ ಈ ಮೂರು ಪ್ರಕರಣಗಳು ಹೊಸದಾಗಿ ದೃಢಪಟ್ಟಿವೆಯೇ ಎಂಬುದನ್ನು ಪರೀಕ್ಷಿಸಲಾಗುತ್ತಿದೆ ಎಂದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.