ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ಕ್ರಿಕೆಟ್ ವಿಶ್ವಕಪ್: ನ್ಯೂಜಿಲೆಂಡ್ ತರಬೇತಿ ಬಳಗಕ್ಕೆ ಸ್ಟೀಫನ್ ಫ್ಲೆಮಿಂಗ್

Published 23 ಆಗಸ್ಟ್ 2023, 15:51 IST
Last Updated 23 ಆಗಸ್ಟ್ 2023, 15:51 IST
ಅಕ್ಷರ ಗಾತ್ರ

ಆಕ್ಲೆಂಡ್: ಭಾರತದಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಆಡಲಿರುವ ನ್ಯೂಜಿಲೆಂಡ್ ತಂಡದ ತರಬೇತುದಾರರ ಬಳಗಕ್ಕೆ  ಸ್ಟೀಫನ್ ಫ್ಲೆಮಿಂಗ್, ಇಯಾನ್ ಬೆಲ್ ಮತ್ತು ಜೇಮ್ಸ್ ಫಾಸ್ಟರ್‌ ಅವರನ್ನು ಸೇರ್ಪಡೆ ಮಾಡಲಾಗಿದೆ.

ಫ್ಲೆಮಿಂಗ್ ಅವರು ನ್ಯೂಜಿಲೆಂಡ್ ತಂಡದ ಮಾಜಿ ನಾಯಕರಾಗಿದ್ದಾರೆ. ಬೆಲ್ ಮತ್ತು ಜೇಮ್ಸ್ ಅವರು ಇಂಗ್ಲೆಂಡ್‌ನವರು.

ಇಂಡಿಯನ್ ಪ್ರೀಮಿಯರ್ ಲೀಗ್‌ ಕ್ರಿಕೆಟ್ ಟೂರ್ನಿಯಲ್ಲಿ ಆಡುವ ಮಹೇಂದ್ರಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಫ್ಲೆಮಿಂಗ್ ಕೋಚ್ ಆಗಿ ದಶಕಕ್ಕೂ ಹೆಚ್ಚು ಕಾಲ ಕಾರ್ಯನಿರ್ವಹಿಸಿದ್ದಾರೆ. ಮುಂದಿನ ತಿಂಗಳು ನಡೆಯುವ ದ ಹಂಡ್ರೆಡ್ ಟೂರ್ನಿಯಲ್ಲಿ ಅವರು ಸದರ್ನ್ ಬ್ರೇವ್‌ ತಂಡದಲ್ಲಿ ಕಾರ್ಯನಿರ್ವಹಿಸುವರು ನಂತರ ಕಿವೀಸ್ ಬಳಗವನ್ನು ಸೇರಿಕೊಳ್ಳಲಿದ್ದಾರೆ. 

ಅಕ್ಟೋಬರ್ 5ರಂದು ನಡೆಯುವ ವಿಶ್ವಕಪ್ ಟೂರ್ನಿಯ ಮೊದಲ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.

‘ಫ್ಲೆಮಿಂಗ್ ನಮ್ಮ ತಂಡಕ್ಕೆ ಸೇರ್ಪಡೆಯಾಗುತ್ತಿರುವುದು ಮಹತ್ವದ ಸಂಗತಿ. ಅವರು ಎಲ್ಲ ಆಟಗಾರರೊಂದಿಗೂ ನಿಕಟವಾಗಿದ್ದಾರೆ. ಆದ್ದರಿಂದ ಉತ್ತಮ ಮಾರ್ಗದರ್ಶನ ನೀಡುವರು‘ ಎಂದು ಕಿವೀಸ್ ತಂಡದ ಮುಖ್ಯ ಕೋಚ್ ಗ್ಯಾರಿ ಸ್ಟೆಡ್ ಹೇಳಿದರು.

ಜೇಮ್ಸ್ ಫಾಸ್ಟರ್ ಅವರು ಕೋಲ್ಕತ್ತ ನೈಟ್ ರೈಡರ್ಸ್ ತಂಡದ ಸಹಾಯಕ ಕೋಚ್ ಆಗಿದ್ದಾರೆ. ವಿಶ್ವದ ಬೇರೆ ಬೇರೆ ಲೀಗ್‌ ಟೂರ್ನಿಗಳಲ್ಲಿ ತರಬೇತುದಾರರಾಗಿ ಕಾರ್ಯನಿರ್ವಹಿಸಿರುವ ಅನುಭವ ವಿಕೆಟ್‌ಕೀಪರ್ ಜೇಮ್ಸ್‌ಗೆ ಇದೆ.

ಇಂಗ್ಲೆಂಡ್ ತಂಡದ ಮಾಜಿ ಬ್ಯಾಟರ್ ಬೆಲ್ ಇದೇ ತಿಂಗಳು ತಂಡವನ್ನು ಸೇರಿಕೊಳ್ಳುವರು. ನ್ಯೂಜಿಲೆಂಡ್ ತಂಡವು ಈ ಮಾಸಾಂತ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಏಕದಿನ ಕ್ರಿಕೆಟ್ ಸರಣಿ ಆಡಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT