ದುಬೈ (ಪಿಟಿಐ): ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಅವರು ಐಸಿಸಿ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಬಡ್ತಿ ಪಡೆದಿದ್ದಾರೆ.
ಬುಧವಾರ ಪ್ರಕಟವಾದ ರ‍್ಯಾಂಕಿಂಗ್‌ನ ಬ್ಯಾಟರ್‌ಗಳ ವಿಭಾಗದಲ್ಲಿ ರೋಹಿತ್ ಒಂದು ಸ್ಥಾನ ಏರಿಕೆ ದಾಖಲಿಸಿ ಎಂಟನೇ ಸ್ಥಾನದಲ್ಲಿದ್ದಾರೆ. ಹಾರ್ದಿಕ್ ಪಾಂಡ್ಯ ಅವರು ಬೌಲರ್‌ಗಳ ವಿಭಾಗದಲ್ಲಿ 10 ಸ್ಥಾನ ಜಿಗಿತ ಕಂಡು 76ನೇ ಸ್ಥಾನ ತಲುಪಿದ್ದಾರೆ.
ಬ್ಯಾಟರ್‌ಗಳ ಪಟ್ಟಿಯಲ್ಲಿ ಶುಭಮನ್ ಗಿಲ್ ಐದನೇ ಸ್ಥಾನದಲ್ಲಿದ್ದರೆ, ವಿರಾಟ್ ಕೊಹ್ಲಿ ಏಳನೇ ಸ್ಥಾನದಲ್ಲಿದ್ದಾರೆ. ಅಗ್ರಸ್ಥಾನದಲ್ಲಿ ಪಾಕಿಸ್ತಾನ ಬಾಬರ್ ಆಜಂ ಇದ್ದಾರೆ.
ಅಗ್ರ 10ರೊಳಗಿನ ಬೌಲರ್‌ಗಳ ಪಟ್ಟಿಯಲ್ಲಿ ಭಾರತದ ಆಟಗಾರನಾಗಿ ಮೊಹಮ್ಮದ್ ಸಿರಾಜ್ (3ನೇ ಸ್ಥಾನ) ಒಬ್ಬರೇ ಸ್ಥಾನ ಗಳಿಸಿದ್ದಾರೆ.
ಟಿ20 ಬೌಲರ್‌ಗಳ ರ‍್ಯಾಂಕಿಂಗ್‌ನಲ್ಲಿ ಅಫ್ಗಾನಿಸ್ತಾನದ ಲೆಗ್‌ಸ್ಪಿನ್ನರ್ ರಶೀದ್ ಖಾನ್ ಅಗ್ರಸ್ಥಾನಕ್ಕೆ ಮರಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.