ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಐಸಿಸಿ ಏಕದಿನ ರ‍್ಯಾಂಕಿಂಗ್: ಕೊಹ್ಲಿ, ರೋಹಿತ್ ಸ್ಥಾನ ಅಬಾಧಿತ

Last Updated 5 ಆಗಸ್ಟ್ 2020, 14:18 IST
ಅಕ್ಷರ ಗಾತ್ರ

ದುಬೈ : ಸುಮಾರು ನಾಲ್ಕು ತಿಂಗಳಿಂದ ಕ್ರಿಕೆಟ್‌ನಿಂದ ದೂರವೇ ಉಳಿದಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಐಸಿಸಿ ಏಕದಿನ ಕ್ರಿಕೆಟ್ ರ‍್ಯಾಂಕಿಂಗ್‌ನಲ್ಲಿ ಕ್ರಮವಾಗಿ ಮೊದಲೆರಡು ಸ್ಥಾನಗಳನ್ನು ಕಾಪಾಡಿಕೊಂಡಿದ್ದಾರೆ.

ಬುಧವಾರ ಪ್ರಕಟವಾಗಿರುವ ರ‍್ಯಾಂಕಿಂಗ್ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ (871 ಪಾಯಿಂಟ್ಸ್) ಮತ್ತು ಶರ್ಮಾ (855) ಅವರು ಮೊದಲ ಹಾಗೂ ಎರಡನೇ ಸ್ಥಾನದಲ್ಲಿದ್ದಾರೆ. ಪಾಕಿಸ್ತಾನದ ಬಾಬರ್ ಅಜಂ (829) ಮೂರನೇ ಸ್ಥಾನದಲ್ಲಿದ್ಧಾರೆ.

ಮಂಗಳವಾರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಐರ್ಲೆಂಡ್‌ನ ಐತಿಹಾಸಿಕ ಗೆಲುವಿಗೆ ಕಾರಣರಾದ ಆ್ಯಂಡ್ರ್ಯೂ ಬಲ್ಬಿರ್ನಿ ನಾಲ್ಕು ಸ್ಥಾನಗಳ ಬಡ್ತಿ ಪಡೆದು, 42ನೇ ಸ್ಥಾನಕ್ಕೇರಿದ್ದಾರೆ. ಅವರು ಶತಕ ಬಾರಿಸಿದ್ದರು. ಅವರೊಂದಿಗೆ ಅಮೋಘ ಜೊತೆಯಾಟವಾಸದ್ದ ಪಾಲ್ ಸ್ಟರ್ಲಿಂಗ್ ಕೂಡ 26ನೇ ಸ್ಥಾನಕ್ಕೇರಿದ್ದಾರೆ. ಅವರೂ 142 ರನ್‌ ಗಳಿಸಿದ್ದರು.

ಬೌಲಿಂಗ್ ವಿಭಾಗದಲ್ಲಿ ಭಾರತದ ಮಧ್ಯಮವೇಗಿ ಜಸ್‌ಪ್ರೀತ್ ಬೂಮ್ರಾ (719) ಅವರು ಎರಡನೇ ಸ್ಥಾನದಲ್ಲಿ ಮುಂದುವರಿದಿದ್ದಾರೆ. ನ್ಯೂಜಿಲೆಂಡ್‌ನ ವೇಗಿ ಟ್ರೆಂಟ್ ಬೌಲ್ಟ್‌ ಅಗ್ರಸ್ಥಾನ ಕಾಪಾಡಿಕೊಂಡಿ್ದ್ದಾರೆ.

ಆಲ್‌ರೌಂಡರ್ ವಿಭಾಗದಲ್ಲಿ ಅಫ್ಗಾನಿಸ್ತಾನದ ಮೊಹಮ್ಮದ್ ನಬಿ 301 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಭಾರತದ ರವೀಂದ್ರ ಜಡೇಜ ಎಂಟನೇ ಸ್ಥಾನದಲ್ಲಿದ್ದಾರೆ. ಎರಡನೇ ಸ್ಥಾನದಲ್ಲಿ ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್‌ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT