ಗುರುವಾರ , ಮಾರ್ಚ್ 30, 2023
32 °C

ಹರಭಜನ್ ಸಿಂಗ್ ಸಾರ್ವಕಾಲಿಕ ಶ್ರೇಷ್ಠ ಟಿ20 ತಂಡದಲ್ಲಿ ವಿರಾಟ್‌ಗಿಲ್ಲ ಸ್ಥಾನ!

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತೀಯ ಕ್ರಿಕೆಟಿಗ, ಆಫ್ ಸ್ಪಿನ್ನರ್ ಹರಭಜನ್ ಸಿಂಗ್ ಪ್ರಕಟಿಸಿರುವ ಸಾರ್ವಕಾಲಿಕ ಶ್ರೇಷ್ಠ ಟ್ವೆಂಟಿ-20 ತಂಡದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರನ್ನು ಕಡೆಗಣಿಸಿರುವುದು ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ಹರಭಜನ್ ಸಿಂಗ್ ಆಯ್ಕೆ ಮಾಡಿರುವ ಸಾರ್ವಕಾಲಿಕ ಶ್ರೇಷ್ಠ ಟ್ವೆಂಟಿ-20 ಇಲೆವೆನ್ ತಂಡದಲ್ಲಿ ಮೂವರು ಭಾರತೀಯರು ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ: 

ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಹಿಟ್‌ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಮತ್ತು ಯಾರ್ಕರ್ ಸ್ಟಾರ್ ಜಸ್‌ಪ್ರೀತ್ ಬೂಮ್ರಾ ಅವರಿಗೆ ಸ್ಥಾನ ಕಲ್ಪಿಸಲಾಗಿದೆ.

 

 

 

ಇನ್ನು ವೆಸ್ಟ್‌ಇಂಡೀಸ್‌ನ ಕ್ರಿಸ್ ಗೇಲ್, ಡ್ವೇನ್ ಬ್ರಾವೊ, ಕೀರಾನ್ ಪೊಲಾರ್ಡ್, ಸುನಿಲ್ ನರೈನ್, ಆಸ್ಟ್ರೇಲಿಯಾದ ಶೇನ್ ವಾಟ್ಸನ್, ದಕ್ಷಿಣ ಆಫ್ರಿಕಾದ ಎಬಿ ಡಿವಿಲಿಯರ್ಸ್, ಶ್ರೀಲಂಕಾದ ಲಸಿತ್ ಮಾಲಿಂಗ ಮತ್ತು ಇಂಗ್ಲೆಂಡ್‌ನ ಜೋಸ್ ಬಟ್ಲರ್ ಅವರನ್ನು ಆಯ್ಕೆ ಮಾಡಿದ್ದಾರೆ.

 

ಹರಭಜನ್ ಸಿಂಗ್ ಆಯ್ಕೆ ಮಾಡಿರುವ ಸಾರ್ವಕಾಲಿಕ ಶ್ರೇಷ್ಠ ಟಿ20 ತಂಡ ಇಂತಿದೆ:
1. ರೋಹಿತ್ ಶರ್ಮಾ
2. ಕ್ರಿಸ್ ಗೇಲ್
3. ಜೋಸ್ ಬಟ್ಲರ್
4. ಶೇನ್ ವ್ಯಾಟ್ಸನ್
5. ಎಬಿ ಡಿವಿಲಿಯರ್ಸ್
6. ಮಹೇಂದ್ರ ಸಿಂಗ್ ಧೋನಿ
7. ಡ್ವೇನ್ ಬ್ರಾವೊ
8. ಕೀರಾನ್ ಪೊಲಾರ್ಡ್
9. ಸುನಿಲ್ ನರೈನ್
10. ಲಸಿತ್ ಮಾಲಿಂಗ
11. ಜಸ್‌ಪ್ರೀತ್ ಬೂಮ್ರಾ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು