ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗೂಲಿ ಮೇಲೆ ಸದ್ಯಕ್ಕಿಲ್ಲ ಕ್ರಮ

ಹಿತಾಸಕ್ತಿ ಸಂಘರ್ಷ
Last Updated 10 ಏಪ್ರಿಲ್ 2019, 17:51 IST
ಅಕ್ಷರ ಗಾತ್ರ

ನವದೆಹಲಿ:ಹಿತಾಸಕ್ತಿ ಸಂಘರ್ಷ ಆರೋಪಕ್ಕೆ ಗುರಿಯಾಗಿರುವ ಸೌರವ್‌ ಗಂಗೂಲಿ ವಿರುದ್ಧ ತಕ್ಷಣಕ್ಕೆ ಯಾವುದೇ ಕ್ರಮ ಕೈಗೊಳ್ಳದಿರಲುಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿಯ (ಬಿಸಿಸಿಐ) ಒಂಬುಡ್ಸ್‌ಮನ್‌ ನಿರ್ಧರಿಸಿದೆ.

ಬಂಗಾಳ ಕ್ರಿಕೆಟ್‌ ಸಂಸ್ಥೆಯ (ಸಿಎಬಿ) ಅಧ್ಯಕ್ಷರಾಗಿರುವ ಗಂಗೂಲಿ, ಐಪಿಎಲ್‌ನಲ್ಲಿ ಆಡುತ್ತಿರುವ ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಸಲಹೆಗಾರರಾಗಿಯೂ ಕೆಲಸ ಮಾಡುತ್ತಿದ್ದಾರೆ. ಈ ಮೂಲಕ ಹಿತಾಸಕ್ತಿ ಸಂಘರ್ಷಕ್ಕೆ ಒಳಗಾಗಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೋಲ್ಕತ್ತದ ರಂಜೀತ್‌ ಸೀಲ್‌, ಅಭಿಜಿತ್‌ ಮುಖರ್ಜಿ ಮತ್ತು ಭಾಸ್ವತಿ ಶಾಂತುವ ಅವರು ನಿವೃತ್ತ ನ್ಯಾಯಮೂರ್ತಿ ಜೈನ್‌ ಅವರಿಗೆ ಪ್ರತ್ಯೇಕವಾಗಿ ದೂರು ನೀಡಿದ್ದರು. ಈ ಸಂಬಂಧ ಒಂಬುಡ್ಸ್‌ಮನ್‌, ಗಂಗೂಲಿ ಅವರಿಂದ ಸ್ಪಷ್ಟನೆ ಕೇಳಿತ್ತು. ಇದಕ್ಕೆ ಪತ್ರ ಮುಖೇನ ಅವರು ಸ್ಪಷ್ಟನೆಯನ್ನು ನೀಡಿದ್ದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ, ಬಿಸಿಸಿಐ ಒಂಬುಡ್ಸುಮನ್‌ ಡಿ.ಕೆ.ಜೈನ್‌ ಅವರು ಖುದ್ದು ಗಂಗೂಲಿಯ ವಿಚಾರಣೆ ನಡೆಸಿದ ಬಳಿಕವೇ ಕ್ರಮ ಕೈಗೊಳ್ಳುವ ಕುರಿತು ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

‘ಡೆಲ್ಲಿ ಕ್ಯಾಪಿಟಲ್ಸ್ ಸಲಹೆಗಾರರಾಗಿ ಗಂಗೂಲಿ ಮುಂದುವರಿಯಲಿದ್ದಾರೆ. ಒಂಬುಡ್ಸ್‌ಮನ್‌ನಲ್ಲಿ ಇನ್ನಷ್ಟೇ ಈ ವಿಚಾರ ಇತ್ಯರ್ಥವಾಗಬೇಕಿದೆ. ಈ ಕಾರಣದಿಂದ ಈಗಿರುವ ಹುದ್ದೆಯನ್ನು ತಡೆಯಲು ಯಾವುದೇ ಕಾನೂನಿನಿಂದಲೂ ಸಾಧ್ಯವಿಲ್ಲ’ ಎಂದು ಬಿಸಿಸಿಐನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT