ಶನಿವಾರ, ಮಾರ್ಚ್ 25, 2023
25 °C

ಐಪಿಎಲ್‌: ಪ್ರತ್ಯೇಕವಾಸ ಕಡಿತಕ್ಕೆ ಇಂಗ್ಲೆಂಡ್–ಆಸ್ಟ್ರೇಲಿಯಾ ಆಟಗಾರರ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಟಿ20 ಕ್ರಿಕೆಟ್ ಟೂರ್ನಿಯಲ್ಲಿ ಆಡಲು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ತೆರಳಲಿರುವ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾದ ಆಟಗಾರರು ತಮ್ಮ ಕ್ವಾರಂಟೈನ್ ಅವಧಿಯನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದ್ದಾರೆ.

ಈ ಬಗ್ಗೆ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಪತ್ರ ಬರೆದಿರುವ ಆಟಗಾರರು, ‘ಯುಎಇಗೆ ತೆರಳಿದ ಮೇಲೆ ಆರು ದಿನಗಳ ಕ್ವಾರಂಟೈನ್‌ಗೆ ಒಳಗಾಗಬೇಕಿದೆ. ಇದರಿಂದಾಗಿ ಆರಂಭದ ಪಂದ್ಯಗಳಲ್ಲಿ ಆಡುವುದನ್ನು ತಪ್ಪಿಸಿಕೊಳ್ಳುತ್ತೇವೆ. ಇಂಗ್ಲೆಂಡ್‌ನಲ್ಲಿ ನಡೆದ ಸರಣಿಯ ಸಂದರ್ಭದಲ್ಲಿ ಕ್ವಾರಂಟೈನ್ ಪಾಲಿಸಿದ್ದೇವೆ.  ಸರಣಿಯ ನಂತರ ತೆರಳುವಾಗಲೂ ಪರೀಕ್ಷೆ ನೀಡಲಿದ್ದೇವೆ. ಆದ್ದರಿಂದ ಯುಎಇಯಲ್ಲಿ ರಿಯಾಯಿತಿ ನೀಡಬೇಕು. ಬರೀ ಮೂರು ದಿನಗಳಿಗೆ ನಿಗದಿ ಮಾಡಬೇಕು’ ಎಂದಿದ್ದಾರೆ.

ಬುಧವಾರ ಮ್ಯಾಂಚೆಸ್ಟರ್‌ನಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವಣ ಮೂರನೇ ಮತ್ತು ಕೊನೆಯ ಏಕದಿನ ಪಂದ್ಯ ನಡೆಯಲಿದೆ. 17ರಂದು ಮ್ಯಾಂಚೆಸ್ಟರ್‌ನಿಂದ ದುಬೈಗೆ ವಿಶೇಷ ವಿಮಾನದ ಮೂಲಕ ಒಟ್ಟು 21 ಆಟಗಾರರು ಪ್ರಯಾಣಿಸಲಿದ್ದಾರೆ. 19ರಂದು ಟೂರ್ನಿ ಆರಂಭವಾಗಲಿದೆ. ಪ್ರತ್ಯೇಕವಾಸದ ನಿಯಮ ಪಾಲಿಸಿದರೆ 23ರಂದು ಅವರು ಕಣಕ್ಕಿಳಿಯಲು ಸಾಧ್ಯವಾಗುತ್ತದೆ.

‘ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಆಟಗಾರರು ಬರೆದಿರುವ ಪತ್ರ ತಲುಪಿದೆ ’ ಎಂದು ಐಪಿಎಲ್‌ ಆಡಳಿತ ಸಮಿತಿಯ ಸದಸ್ಯರೊಬ್ಬರು ಖಚಿತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು