ಸೋಮವಾರ, ಏಪ್ರಿಲ್ 19, 2021
32 °C
ವಿಂಡೀಸ್‌ ಎದುರಿನ ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡ ಪ್ರಕಟ

ಏಕದಿನ ಕ್ರಿಕೆಟ್‌ ತಂಡಕ್ಕೆ ಮರಳಿದ ಉಮೇಶ್‌ ಯಾದವ್‌

ಪಿಟಿಐ Updated:

ಅಕ್ಷರ ಗಾತ್ರ : | |

Deccan Herald

ನವದೆಹಲಿ: ಮಧ್ಯಮ ವೇಗದ ಬೌಲರ್‌ ಉಮೇಶ್‌ ಯಾದವ್‌ ಏಕದಿನ ಕ್ರಿಕೆಟ್‌ ತಂಡಕ್ಕೆ ಮರಳಿದ್ದಾರೆ.

ವೆಸ್ಟ್‌ ಇಂಡೀಸ್‌ ಎದುರಿನ ಐದು ಪಂದ್ಯಗಳ ಸರಣಿಯ ಮೊದಲ ಎರಡು ಹಣಾಹಣಿಗಳಿಗೆ ಮಂಗಳವಾರ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)  14 ಸದಸ್ಯರ ತಂಡ ಪ್ರಕಟಿಸಿದೆ.

ಶಾರ್ದೂಲ್‌ ಠಾಕೂರ್‌ ಗಾಯಗೊಂಡಿರುವ ಕಾರಣ ಉಮೇಶ್‌ಗೆ ಅವಕಾಶ ಕಲ್ಪಿಸಲಾಗಿದೆ. ವಿಂಡೀಸ್‌ ಎದುರಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಅವರು 10 ವಿಕೆಟ್‌ ಉರುಳಿಸಿ ಗಮನ ಸೆಳೆದಿದ್ದರು.

ಕರ್ನಾಟಕದ ಕೆ.ಎಲ್‌.ರಾಹುಲ್‌ ಮತ್ತು ಮನೀಷ್‌ ಪಾಂಡೆ ಅವರಿಗೂ ಅವಕಾಶ ಲಭಿಸಿದೆ. ದೇಶಿಯ ಟೂರ್ನಿಗಳಲ್ಲಿ ಮಿಂಚಿದ್ದ ಮಯಂಕ್‌ ಅಗರವಾಲ್‌ ಮತ್ತೊಮ್ಮೆ ಆಯ್ಕೆ ಸಮಿತಿಯ ಅವಕೃಪೆಗೆ ಒಳಗಾಗಿದ್ದಾರೆ. 73 ಏಕದಿನ ಪಂದ್ಯಗಳನ್ನು ಆಡಿರುವ ಉಮೇಶ್‌ 105 ವಿಕೆಟ್‌ ಉರುಳಿಸಿದ್ದಾರೆ.

ಮೊದಲ ಏಕದಿನ ಪಂದ್ಯ ಅಕ್ಟೋಬರ್‌ 21ರಂದು ಗುವಾಹಟಿಯಲ್ಲಿ ನಡೆಯಲಿದೆ.

ತಂಡ ಇಂತಿದೆ: ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮಾ (ಉಪ ನಾಯಕ), ಶಿಖರ್‌ ಧವನ್‌, ಕೆ.ಎಲ್‌.ರಾಹುಲ್‌, ಅಂಬಟಿ ರಾಯುಡು, ಮನೀಷ್‌ ಪಾಂಡೆ, ಮಹೇಂದ್ರ ಸಿಂಗ್‌ ಧೋನಿ (ವಿಕೆಟ್‌ ಕೀಪರ್‌), ರಿಷಭ್‌ ಪಂತ್‌, ರವೀಂದ್ರ ಜಡೇಜ, ಯಜುವೇಂದ್ರ ಚಾಹಲ್‌, ಕುಲದೀಪ್‌ ಯಾದವ್‌, ಮೊಹಮ್ಮದ್‌ ಶಮಿ, ಖಲೀಲ್‌ ಅಹ್ಮದ್‌ ಮತ್ತು ಉಮೇಶ್‌ ಯಾದವ್‌.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು