ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಏಕದಿನ ಕ್ರಿಕೆಟ್‌ ತಂಡದಲ್ಲಿ ಉಮೇಶ್‌ ಯಾದವ್‌ಗೆ ಸ್ಥಾನ

ವಿಂಡೀಸ್‌ ಎದುರಿನ ಮೊದಲ ಎರಡು ಪಂದ್ಯಗಳಿಗೆ ಭಾರತ ತಂಡ
Last Updated 16 ಅಕ್ಟೋಬರ್ 2018, 17:28 IST
ಅಕ್ಷರ ಗಾತ್ರ

ನವದೆಹಲಿ: ಮಧ್ಯಮ ವೇಗದ ಬೌಲರ್‌ ಉಮೇಶ್‌ ಯಾದವ್‌ ಏಕದಿನ ಕ್ರಿಕೆಟ್‌ ತಂಡಕ್ಕೆ ಮರಳಿದ್ದಾರೆ.

ವೆಸ್ಟ್‌ ಇಂಡೀಸ್‌ ಎದುರಿನ ಐದು ಪಂದ್ಯಗಳ ಸರಣಿಯ ಮೊದಲ ಎರಡು ಹಣಾಹಣಿಗಳಿಗೆ ಮಂಗಳವಾರ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) 14 ಸದಸ್ಯರ ತಂಡ ಪ್ರಕಟಿಸಿದೆ.

ಶಾರ್ದೂಲ್‌ ಠಾಕೂರ್‌ ಗಾಯಗೊಂಡಿರುವ ಕಾರಣ ಉಮೇಶ್‌ಗೆ ಅವಕಾಶ ಕಲ್ಪಿಸಲಾಗಿದೆ. ವಿಂಡೀಸ್‌ ಎದುರಿನ ಎರಡನೇ ಟೆಸ್ಟ್‌ ಪಂದ್ಯದಲ್ಲಿ ಅವರು 10 ವಿಕೆಟ್‌ ಉರುಳಿಸಿ ಗಮನ ಸೆಳೆದಿದ್ದರು.

ಕರ್ನಾಟಕದ ಕೆ.ಎಲ್‌.ರಾಹುಲ್‌ ಮತ್ತು ಮನೀಷ್‌ ಪಾಂಡೆ ಅವರಿಗೂ ಅವಕಾಶ ಲಭಿಸಿದೆ. ದೇಶಿಯ ಟೂರ್ನಿಗಳಲ್ಲಿ ಮಿಂಚಿದ್ದ ಮಯಂಕ್‌ ಅಗರವಾಲ್‌ ಮತ್ತೊಮ್ಮೆ ಆಯ್ಕೆ ಸಮಿತಿಯ ಅವಕೃಪೆಗೆ ಒಳಗಾಗಿದ್ದಾರೆ. 73 ಏಕದಿನ ಪಂದ್ಯಗಳನ್ನು ಆಡಿರುವ ಉಮೇಶ್‌ 105 ವಿಕೆಟ್‌ ಉರುಳಿಸಿದ್ದಾರೆ.

ಮೊದಲ ಏಕದಿನ ಪಂದ್ಯ ಅಕ್ಟೋಬರ್‌ 21ರಂದು ಗುವಾಹಟಿಯಲ್ಲಿ ನಡೆಯಲಿದೆ.

ತಂಡ ಇಂತಿದೆ: ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮಾ (ಉಪ ನಾಯಕ), ಶಿಖರ್‌ ಧವನ್‌, ಕೆ.ಎಲ್‌.ರಾಹುಲ್‌, ಅಂಬಟಿ ರಾಯುಡು, ಮನೀಷ್‌ ಪಾಂಡೆ, ಮಹೇಂದ್ರ ಸಿಂಗ್‌ ಧೋನಿ (ವಿಕೆಟ್‌ ಕೀಪರ್‌), ರಿಷಭ್‌ ಪಂತ್‌, ರವೀಂದ್ರ ಜಡೇಜ, ಯಜುವೇಂದ್ರ ಚಾಹಲ್‌, ಕುಲದೀಪ್‌ ಯಾದವ್‌, ಮೊಹಮ್ಮದ್‌ ಶಮಿ, ಖಲೀಲ್‌ ಅಹ್ಮದ್‌ ಮತ್ತು ಉಮೇಶ್‌ ಯಾದವ್‌.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT