ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಂಗ್ಲಾದೇಶ ಎದುರಿನ ಟಿ20 ಸರಣಿಗೆ ಮಯಂಕ್ ಯಾದವ್

ಬಾಂಗ್ಲಾ ಎದುರು ಭಾರತ ತಂಡಕ್ಕೆ ಸೂರ್ಯ ನಾಯಕ
Published : 28 ಸೆಪ್ಟೆಂಬರ್ 2024, 21:42 IST
Last Updated : 28 ಸೆಪ್ಟೆಂಬರ್ 2024, 21:42 IST
ಫಾಲೋ ಮಾಡಿ
Comments

ನವದೆಹಲಿ: ಹೋದ ಐಪಿಎಲ್‌ನಲ್ಲಿ ಸಂಚಲನ ಸೃಷ್ಟಿಸಿದ್ದ ವೇಗಿ ಮಯಂಕ್ ಯಾದವ್ ಅವರನ್ನು ಬಾಂಗ್ಲಾದೇಶ ಎದುರಿನ ಟಿ20 ಕ್ರಿಕೆಟ್ ಸರಣಿಯಲ್ಲಿ ಆಡುವ ಭಾರತ ತಂಡಕ್ಕೆ ಆಯ್ಕೆ ಮಾಡಲಾಗಿದೆ. 

ಐಪಿಎಲ್‌ ಟೂರ್ನಿಯಲ್ಲಿಯೇ ಗಾಯಗೊಂಡಿದ್ದ ಅವರು ಕಳೆದ ಐದು ತಿಂಗಳು ವಿಶ್ರಾಂತಿಯಲ್ಲಿದ್ದರು. ಇದೀಗ  ಸಂಪೂರ್ಣ ಫಿಟ್ ಆಗಿ ಮರಳಿದ್ದಾರೆ. 

ಆಕ್ಟೋಬರ್ 6ರಿಂದ ನಡೆಯಲಿರುವ ಮೂರು ಟಿ20 ಪಂದ್ಯಗಳ ಸರಣಿಯಲ್ಲಿ ಆಡಲಿರುವ  ಆತಿಥೇಯ ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಸ್ಪಿನ್ನರ್ ವರುಣ್ ಚಕ್ರವರ್ತಿ, ವಿಕೆಟ್‌ಕೀಪರ್ ಜಿತೇಶ್ ಶರ್ಮಾ ಅವರು ಅವಕಾಶ ಗಿಟ್ಟಿಸಿದ್ದಾರೆ. ಆದರೆ ವಿಕೆಟ್‌ಕೀಪರ್ ಬ್ಯಾಟರ್ ಇಶಾನ್ ಕಿಶನ್ ಅವರು ಆಯ್ಕೆಯಾಗಿಲ್ಲ. 

ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್‌ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ರಿಯಾನ್ ಪರಾಗ್, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ,ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯಿ, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್‌ಕೀಪರ್), ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಮಯಂಕ್ ಯಾದವ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT