ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಆಟಗಾರರ ವರ್ತನೆ ಬಗ್ಗೆ ಮಿಸ್ಬಾ ಬೇಸರ

Last Updated 15 ಅಕ್ಟೋಬರ್ 2019, 19:00 IST
ಅಕ್ಷರ ಗಾತ್ರ

ಕರಾಚಿ: ಪಾಕಿಸ್ತಾನ ಕ್ರಿಕೆಟ್‌ ತಂಡದ ಕೆಲ ಹಿರಿಯ ಆಟಗಾರರ ವರ್ತನೆ ಬಗ್ಗೆ ತಂಡದ ಕೋಚ್‌ ಹಾಗೂ ಆಯ್ಕೆ ಸಮಿತಿ ಮುಖ್ಯಸ್ಥ ಮಿಸ್ಬಾ ಉಲ್‌ ಹಕ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ತವರಿನಲ್ಲಿ ನಡೆದಿದ್ದ ಶ್ರೀಲಂಕಾ ಎದುರಿನ ಮೂರು ಪಂದ್ಯಗಳ ಟ್ವೆಂಟಿ–20 ಸರಣಿಯಲ್ಲಿ ಪಾಕಿಸ್ತಾನ ಹೀನಾಯವಾಗಿ ಸೋತಿತ್ತು.

‘ಕೆಲ ಹಿರಿಯ ಆಟಗಾರರು ಅಭ್ಯಾಸವನ್ನು ಲಘುವಾಗಿ ಪರಿಗಣಿಸುತ್ತಿದ್ದಾರೆ. ವೈಯಕ್ತಿಕ ಸಾಮರ್ಥ್ಯ ವೃದ್ಧಿಸಿಕೊಳ್ಳುವತ್ತ ಚಿತ್ತ ಹರಿಸುತ್ತಿಲ್ಲ. ಪದೇ ಪದೇ ಅಶಿಸ್ತು ತೋರುತ್ತಿದ್ದಾರೆ. ತಂಡದ ಆಡಳಿತ ಮಂಡಳಿಯ ನಿರ್ದೇಶನಗಳನ್ನೂ ಪಾಲಿಸುತ್ತಿಲ್ಲ. ಈ ಬಗ್ಗೆ ಎಚ್ಚರಿಕೆ ನೀಡಿದರೂ ನಡವಳಿಕೆಯನ್ನು ಸುಧಾರಿಸಿಕೊಳ್ಳುತ್ತಿಲ್ಲ. ಇದರಿಂದ ಮಿಸ್ಬಾ ಬೇಸರಗೊಂಡಿದ್ದಾರೆ’ ಎಂದು ಪಾಕಿಸ್ತಾನ ಕ್ರಿಕೆಟ್‌ ಮಂಡಳಿಯ (ಪಿಸಿಬಿ) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT