ಶನಿವಾರ, ಫೆಬ್ರವರಿ 29, 2020
19 °C

PAK vs BAN ಟಿ20 ಸರಣಿ | ಬಾಂಗ್ಲಾದೇಶ ಎದುರು ಪಾಕಿಸ್ತಾನಕ್ಕೆ ಸುಲಭ ಜಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಲಾಹೋರ್‌: ಬಾಂಗ್ಲಾದೇಶ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ 9 ವಿಕೆಟ್‌ಗಳ ಜಯ ಸಾಧಿಸಿದ ಪಾಕಿಸ್ತಾನ ಮೂರು ಪಂದ್ಯಗಳ ಸರಣಿಯಲ್ಲಿ 2–0 ಮುನ್ನಡೆ ಗಳಿಸಿತು.

ಇಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ ಪಡೆ ನಿಗದಿತ ಓವರ್‌ಗಳಲ್ಲಿ ಆರು ವಿಕೆಟ್‌ ಕಳೆದುಕೊಂಡು 137 ರನ್‌ ಗಳಿಸಲಷ್ಟೇ ಶಕ್ತವಾಯಿತು. ಈ ತಂಡಕ್ಕೆ ಆರಂಭಿಕ ತಮೀಮ್‌ ಇಕ್ಬಾಲ್‌ ಹೊರತು ಪಡಿಸಿ ಉಳಿದವರಿಂದ ಉತ್ತಮ ಬ್ಯಾಟಿಂಗ್ ಮೂಡಿಬರಲಿಲ್ಲ.

ಒಂದೆಡೆ ವಿಕೆಟ್‌ ಉರುಳುತ್ತಿದ್ದರೂ ನೆಲಕಚ್ಚಿ ಆಡಿದ ತಮೀಮ್‌ 53 ಎಸೆತಗಳಲ್ಲಿ 65 ರನ್‌ ಗಳಿಸಿ ನೆರವಾದರು.

ಗುರಿಯೆದುರು ನಿರಾಯಾಸವಾಗಿ ಬ್ಯಾಟ್‌ ಬೀಸಿದ ನಾಯಕ ಬಾಬರ್‌ ಅಜಂ ಹಾಗೂ ಅನುಭವಿ ಬ್ಯಾಟ್ಸ್‌ಮನ್‌ ಮೊಹಮ್ಮದ್‌ ಹಫೀಜ್ ತಮ್ಮ ತಂಡಕ್ಕೆ ಸುಲಭ ಜಯ ತಂದುಕೊಟ್ಟರು.

49 ಎಸೆತ ಎಸೆತಗಳನ್ನು ಎದುರಿಸಿದ ಹಫೀಜ್‌ 9 ಬೌಂಡರಿ ಮತ್ತು 1 ಸಿಕ್ಸರ್ ಸಹಿತ 67 ರನ್‌ ಗಳಿಸಿದರು. ಬಾಬರ್‌ 44 ಎಸೆತಗಳಲ್ಲಿ 7 ಬೌಂಡರಿ 1 ಸಿಕ್ಸರ್‌ ಸಹಿತ 66 ರನ್‌ ಕಲೆಹಾಕಿದರು.

ಮೂರನೇ ಹಾಗೂ ಅಂತಿಮ ಪಂದ್ಯವೂ ಇದೇ ಮೈದಾನದಲ್ಲಿ ಸೋಮವಾರ ನಡೆಯಲಿದೆ.

ಸಂಕ್ಷಿಪ್ತ ಸ್ಕೋರ್‌
ಬಾಂಗ್ಲಾದೇಶ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 136

ತಮಿಮ್‌ ಇಕ್ಬಾಲ್‌ 65, ಅಫಿಫ್ ಹುಸೇನ್‌ 21
ಮೊಹಮ್ಮದ್‌ ಹಸನೈನ್‌ 20ಕ್ಕೆ2 ವಿಕೆಟ್‌

ಪಾಕಿಸ್ತಾನ 16.4 ಓವರ್‌ಗಳಲ್ಲಿ ಒಂದು ವಿಕೆಟ್‌ಗೆ 137
ಮೊಹಮ್ಮದ್‌ ಹಫೀಜ್‌ 67, ಬಾಬರ್‌ ಅಜಂ 66
ಶಫಿ ಉಲ್‌ ಇಸ್ಲಾಂ 27ಕ್ಕೆ 1 ವಿಕೆಟ್‌

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು