ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

T20 Cricket | ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಪಾಕ್ ತಂಡದ ನಾಯಕ ಬಾಬರ್ ಅಜಂ

Published 31 ಮೇ 2024, 10:52 IST
Last Updated 31 ಮೇ 2024, 10:52 IST
ಅಕ್ಷರ ಗಾತ್ರ

ಲಂಡನ್‌: ಪಾಕಿಸ್ತಾನದ ನಿಗದಿತ ಓವರ್‌ಗಳ ಕ್ರಿಕೆಟ್‌ ತಂಡದ ನಾಯಕ ಬಾಬರ್‌ ಅಜಂ ಅವರು ಟಿ20 ಕ್ರಿಕೆಟ್‌ನಲ್ಲಿ ವಿರಾಟ್‌ ಕೊಹ್ಲಿ ಬರೆದಿದ್ದ ದಾಖಲೆಯೊಂದನ್ನು ಸರಿಗಟ್ಟಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಟಿ20 ಕ್ರಿಕೆಟ್‌ ಸರಣಿಯ ನಾಲ್ಕನೇ ಪಂದ್ಯದಲ್ಲಿ 36 ರನ್‌ ಗಳಿಸಿದ ಬಾಬರ್‌, ಚುಟುಕು ಮಾದರಿಯಲ್ಲಿ 4,000 ರನ್‌ ಗಳಿಸಿದ ಸಾಧನೆ ಮಾಡಿದರು.

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಕೊಹ್ಲಿ ಮತ್ತು ಬಾಬರ್‌ ಮಾತ್ರವೇ ನಾಲ್ಕು ಸಹಸ್ರ ರನ್‌ ಗಳಿಸಿದ ಸಾಧನೆ ಮಾಡಿದ್ದಾರೆ.

ಈ ಮಾದರಿಯ 119 ಪಂದ್ಯಗಳ 112 ಇನಿಂಗ್ಸ್‌ಗಳಲ್ಲಿ ಬ್ಯಾಟ್‌ ಬೀಸಿರುವ ಪಾಕ್‌ ಆಟಗಾರ, 36 ಅರ್ಧಶತಕ ಮತ್ತು 3 ಶತಕ ಸಹಿತ 4,023 ರನ್ ಕಲೆಹಾಕಿದ್ದಾರೆ.

ಭಾರತದ ಮಾಜಿ ನಾಯಕ ಕೊಹ್ಲಿ, 115 ಪಂದ್ಯಗಳ 107 ಇನಿಂಗ್ಸ್‌ಗಳಲ್ಲೇ 4,000 ರನ್‌ ಗಳಿಸಿದ ಸಾಧನೆ ಮಾಡಿದ್ದರು. ಒಂದು ಶತಕ ಮತ್ತು 37 ಅರ್ಧಶತಕಗಳು ಅವರ ಖಾತೆಯಲ್ಲಿವೆ.

ಭಾರತ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮಾ ಅವರೂ ಈ ಸಾಧನೆಯ ಸನಿಹದಲ್ಲಿದ್ದಾರೆ.

ಇಂಗ್ಲೆಂಡ್‌ಗೆ ಸರಣಿ
ಟಿ20 ವಿಶ್ವಕಪ್‌ಗೂ ಮುನ್ನ ನಡೆದ ನಾಲ್ಕು ಪಂದ್ಯಗಳ ಸರಣಿಯನ್ನು ಇಂಗ್ಲೆಂಡ್‌ 2–0 ಅಂತರದಲ್ಲಿ ಗೆದ್ದುಕೊಂಡಿದೆ.

ಲೀಡ್ಸ್‌ನಲ್ಲಿ ನಡೆಯಬೇಕಿದ್ದ ಮೊದಲನೇ ಹಾಗೂ ಕಾರ್ಡಿಫ್‌ನಲ್ಲಿ ಆಯೋಜನೆಗೊಂಡಿದ್ದ ಮೂರನೇ ಪಂದ್ಯ ಮಳೆಯಿಂದಾಗಿ ರದ್ದಾಗಿದ್ದವು. ಬರ್ಮಿಂಗ್‌ಹ್ಯಾಂನಲ್ಲಿ ನಡೆದ 2ನೇ ಹಾಗೂ ಶನಿವಾರ ಲಂಡನ್‌ನ ಕೆನ್ನಿಂಗ್ಟನ್‌ ಓವಲ್‌ ಕ್ರೀಡಾಂಗಣದಲ್ಲಿ ನಡೆದ ಪಂದ್ಯಗಳನ್ನು ಇಂಗ್ಲೆಂಡ್‌ ಗೆದ್ದುಕೊಂಡಿದೆ.

ಅಂ.ರಾ ಟಿ20 ಕ್ರಿಕೆಟ್; ಹೆಚ್ಚು ರನ್ ಗಳಿಸಿದ ಐವರು
<div class="paragraphs"><p></p></div>

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT