ನವದೆಹಲಿ: ಭಾರತದಲ್ಲಿ ಅಕ್ಟೋಬರ್ ತಿಂಗಳಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಪಾಲ್ಗೊಳ್ಳುವ ಪಾಕಿಸ್ತಾನ ತಂಡದ ಆಟಗಾರರಿಗೆ ವೀಸಾ ನೀಡಲು ಸರ್ಕಾರ ಒಪ್ಪಿಕೊಂಡಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ತಿಳಿಸಿದೆ.

ಶುಕ್ರವಾರ ನಡೆದ ಅಪೆಕ್ಸ್ ಸಮಿತಿ ಸಭೆಯಲ್ಲಿ ಮಂಡಳಿಯ ಕಾರ್ಯದರ್ಶಿ ಜಯ ಶಾ ಈ ವಿಷಯವನ್ನು ಘೋಷಿಸಿದ್ದಾರೆ. ದೇಶದ ಒಂಬತ್ತು ಕ್ರೀಡಾಂಗಣಗಳಲ್ಲಿ ಪಂದ್ಯಗಳು ನಡೆಯಲಿದ್ದು ಅಹಮದಾಬಾದ್‌ನ ನರೇಂದ್ರ ಮೋದಿ ಅಂಗಣ ಫೈನಲ್ ಹಣಾಹಣಿಗೆ ಆತಿಥ್ಯ ವಹಿಸಲಿದೆ ಎಂದು ಶಾ ತಿಳಿಸಿದ್ದಾರೆ.

ಬೆಂಗಳೂರು, ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತ, ಹೈದರಾಬಾದ್, ಧರ್ಮಶಾಲಾ ಮತ್ತು ಲಖನೌದಲ್ಲಿ ಪಂದ್ಯಗಳು ನಡೆಯಲಿವೆ.

ರಾಜತಾಂತ್ರಿಕ ಕಾರಣಗಳಿಂದಾಗಿ ಭಾರತ ಮತ್ತು ಪಾಕಿಸ್ತಾನ ಒಂದು ದಶಕದಿಂದ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯಗಳನ್ನು ಆಡಿಲ್ಲ. ಭಾರತದಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಟೂರ್ನಿಗೆ ವೀಸಾ ನೀಡುವಂತೆ ಪಾಕಿಸ್ತಾನ ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿಯನ್ನು ಸತತವಾಗಿ ಒತ್ತಾಯಿಸುತ್ತಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.