ಸೋಮವಾರ, ಮೇ 17, 2021
31 °C

ಟಿ–20 ವಿಶ್ವಕಪ್ ಟೂರ್ನಿ: ಪಾಕ್ ಕ್ರಿಕೆಟ್ ಆಟಗಾರರಿಗೆ ವೀಸಾ ಸಿಗಲಿದೆ: ಜಯ್ ಶಾ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಅಕ್ಟೋಬರ್‌ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿರುವ ಟಿ–20 ವಿಶ್ವಕಪ್‌ ಟೂರ್ನಿಯಲ್ಲಿ ಭಾಗವಹಿಸಲು ಪಾಕಿಸ್ತಾನದ ಕ್ರಿಕೆಟ್ ಆಟಗಾರರಿಗೆ ವೀಸಾ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಅವರು ಬಿಸಿಸಿಐನ ಅಪೆಕ್ಸ್ ಕೌನ್ಸಿಲ್‌ಗೆ ತಿಳಿಸಿದ್ದಾರೆ.

ಶುಕ್ರವಾರ ನಡೆದ ವಿಡಿಯೊ ಕಾನ್ಫರೆನ್ಸ್ ಸಭೆಯಲ್ಲಿ ಶಾ ಅವರು ಕೌನ್ಸಿಲ್‌ಗೆ ಈ ವಿಷಯ ತಿಳಿಸಿದರು. ಇದೇವೇಳೆ, ಟಿ–20 ವಿಶ್ವಕಪ್ ಟೂರ್ನಿಯನ್ನು ದೇಶದ ಒಂಬತ್ತು ಸ್ಥಳಗಳಲ್ಲಿ ಆಯೋಜಿಸಲು ನಿರ್ಧರಿಸಲಾಯಿತು. ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಫೈನಲ್ ಪಂದ್ಯವನ್ನು ಆಯೋಜಿಸಲು ನಿರ್ಧರಿಸಲಾಗಿದೆ.

ದೆಹಲಿ, ಮುಂಬೈ, ಚೆನ್ನೈ, ಕೋಲ್ಕತ್ತ, ಬೆಂಗಳೂರು, ಹೈದರಾಬಾದ್, ಧರ್ಮಶಾಲಾ ಮತ್ತು ಲಖನೌದಲ್ಲಿ ಪಂದ್ಯಗಳು ನಡೆಯಲಿವೆ.

‘ಪಾಕಿಸ್ತಾನ ಕ್ರಿಕೆಟ್ ತಂಡದ ವೀಸಾ ಸಮಸ್ಯೆ ಬಗೆಹರಿದಿದೆ. ಆದರೂ, ಪಂದ್ಯಗಳನ್ನು ವೀಕ್ಷಿಸಲು ಅಭಿಮಾನಿಗಳು ಗಡಿ ದಾಟಿ ಬರಬಹುದೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ’ ಎಂದು ಅಪೆಕ್ಸ್ ಕೌನ್ಸಿಲ್ ಸದಸ್ಯರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

‘ಈ ಬಗ್ಗೆ ಸರಿಯಾದ ಸಮಯದಲ್ಲಿ ನಿರ್ಧರಿಸಲಾಗುವುದು ಎಂದು ನಾವು ಐಸಿಸಿಗೆ ಭರವಸೆ ನೀಡಿದ್ದೇವೆ’ ಎಂದು ಸಭೆಯಲ್ಲಿ ಕಾರ್ಯದರ್ಶಿ ಶಾ ಘೋಷಿಸಿದರು.

ಉಭಯ ದೇಶಗಳ ರಾಜತಾಂತ್ರಿಕ ಉದ್ವಿಗ್ನತೆಯಿಂದಾಗಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದು ದಶಕದಿಂದ ಕ್ರಿಕೆಟ್ ಸರಣಿ ಆಡಿಲ್ಲ.

ಈ ವರ್ಷ ನಡೆಯಲಿರುವ ಟಿ–20 ವಿಶ್ವಕಪ್ 7ನೇ ಆವೃತ್ತಿಯಲ್ಲಿ ಭಾಗವಹಿಸಲು ತನ್ನ ಆಟಗಾರರಿಗೆ ವೀಸಾ ನೀಡಿಕೆ ಬಗ್ಗೆ ಸ್ಪಷ್ಟನೆ ನೀಡುವಂತೆ ಪಾಕಿಸ್ತಾನವು ಐಸಿಸಿಯನ್ನು ಒತ್ತಾಯಿಸಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು