ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವಕಪ್‌: ಪಾಕ್‌ ಪಂದ್ಯಗಳಿಗೆ ಬಾಂಗ್ಲಾ ಆತಿಥ್ಯ?

Last Updated 31 ಮಾರ್ಚ್ 2023, 3:59 IST
ಅಕ್ಷರ ಗಾತ್ರ

ಕರಾಚಿ: ಈ ವರ್ಷದ ಕೊನೆಯಲ್ಲಿ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಪಾಕಿಸ್ತಾನ ತಂಡವು ತನ್ನ ಪಂದ್ಯಗಳನ್ನು ಬಾಂಗ್ಲಾದೇಶ ಅಥವಾ ಶ್ರೀಲಂಕಾದಲ್ಲಿ ಆಡುವ ಸಾಧ್ಯತೆಯಿದೆ.

ಏಷ್ಯಾಕಪ್‌ ಟೂರ್ನಿಗೆ ಭಾರತ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಿರಲು ಬಿಸಿಸಿಐ ನಿರ್ಧರಿಸಿತ್ತು. ತನ್ನ ಪಂದ್ಯಗಳನ್ನು ಪಾಕಿಸ್ತಾನದ ಬದಲು ತಟಸ್ಥ ತಾಣದಲ್ಲಿ ಆಡುವುದಾಗಿ ಭಾರತ ಹೇಳಿತ್ತು.

ಅದರ ಬೆನ್ನಲ್ಲೇ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಈ ನಿಲುವು ತೆಗೆದುಕೊಂಡಿದೆ. ‘ಏಷ್ಯಾ ಕಪ್‌ಗೆ ಬಿಸಿಸಿಐ ತನ್ನ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸದಿದ್ದರೆ, ನಾವು ವಿಶ್ವಕಪ್‌ ಆಡಲು ಭಾರತಕ್ಕೆ ಹೋಗದಿರಲು ನಿರ್ಧರಿಸಿದ್ದೇವೆ. ನಮ್ಮ ಪಂದ್ಯಗಳನ್ನು ಬಾಂಗ್ಲಾದೇಶ ಅಥವಾ ಶ್ರೀಲಂಕಾದಲ್ಲಿ ಆಡಲು ಬಯಸಿದ್ದೇವೆ’ ಎಂದು ಪಿಸಿಬಿ ಮೂಲಗಳು ಹೇಳಿವೆ.

‘ಪಾಕಿಸ್ತಾನವು ಏಕದಿನ ವಿಶ್ವಕಪ್‌ ಟೂರ್ನಿಯ ಪಂದ್ಯಗಳನ್ನು ಬಾಂಗ್ಲಾದೇಶದಲ್ಲಿ ಆಡುವ ಸಾಧ್ಯತೆಯಿದೆ. ಈ ಕುರಿತ ಚರ್ಚೆ ನಡೆಯುತ್ತಿದೆಯಾದರೂ, ಪಿಸಿಬಿ ಅಧಿಕೃತ ತೀರ್ಮಾನ ತೆಗೆದುಕೊಂಡಿಲ್ಲ’ ಎಂದು ಇಎಸ್‌ಪಿಎನ್‌ಕ್ರಿಕ್‌ಇನ್ಫೊ ವೆಬ್‌ಸೈಟ್‌ ವರದಿ ಮಾಡಿದೆ.

ಏಷ್ಯಾ ಕಪ್‌ ಟೂರ್ನಿ ಸೆಪ್ಟೆಂಬರ್‌ನಲ್ಲಿ ನಡೆಯಲಿದ್ದು, ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT