ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ಐಸಿಸಿ ಟೂರ್ನಿಗಳಿಗೆ ಭಾರತ ಆತಿಥ್ಯ

2025ರ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗೆ ಪಾಕಿಸ್ತಾನ ಆತಿಥ್ಯ
Last Updated 16 ನವೆಂಬರ್ 2021, 16:35 IST
ಅಕ್ಷರ ಗಾತ್ರ

ದುಬೈ: ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು 2023 ರಿಂದ 2031ರ ಅವಧಿಯಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ ಸಮಿತಿಯ ಮೂರು ವಿಶ್ವಮಟ್ಟದ ಟೂರ್ನಿಗಳಿಗೆ ಆತಿಥ್ಯ ವಹಿಸಲಿದೆ. ಪಾಕಿಸ್ತಾನವು ಸುದೀರ್ಘ ಕಾಲದ ನಂತರ ಚಾಂಪಿಯನ್ಸ್‌ ಟ್ರೋಫಿ ಕ್ರಿಕೆಟ್ ಟೂರ್ನಿಗೆ ಆತಿಥ್ಯ ವಹಿಸಲಿದೆ.

2026ರ ಟಿ20 ವಿಶ್ವಕಪ್, 2029ರಲ್ಲಿ ಚಾಂಪಿಯನ್ಸ್‌ ಟ್ರೋಫಿ ಮತ್ತು 2031ರ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಗಳಿಗೆ ಭಾರತ ಆತಿಥ್ಯ ವಹಿಸುವುದು 2025ರಲ್ಲಿ ಚಾಂಪಿಯನ್ಸ್‌ ಟ್ರೋಫಿ ಟೂರ್ನಿಯನ್ನು ಪಾಕ್ ಆಯೋಜಿಸಲಿದೆ.

2009ರಲ್ಲಿ ಲಾಹೋರ್‌ನಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡದ ಬಸ್ ಮೇಲೆ ಭಯೋತ್ಪಾದನಾ ದಾಳಿ ನಡೆದ ನಂತರ ಪಾಕಿಸ್ತಾನದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್‌ ಟೂರ್ನಿಗಳು ಹೆಚ್ದು ನಡೆಯಲಿಲ್ಲ. ವಿಶ್ವಮಟ್ಟದ ಆಯೋಜನೆಯ ಅವಕಾಶವೂ ಆ ದೇಶಕ್ಕೆ ಲಭಿಸಿರಲಿಲ್ಲ. ಇತ್ತೀಚೆಗೆ ನ್ಯೂಜಿಲೆಂಡ್ ಮತ್ತು ಇಂಗ್ಲೆಂಡ್ ತಂಡಗಳೂ ಪಾಕ್‌ನಲ್ಲಿ ಸರಣಿ ಆಡಲು ನಿರಾಕರಿಸಿದ್ದವು.

‘ಪಾಕ್ ಕ್ರಿಕೆಟ್ ಮಂಡಳಿಯು ಬಹುತೇಕ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಟೂರ್ನಿ ಆಯೋಜಿಸುವ ಸಾಧ್ಯತೆ ಹೆಚ್ಚಿದೆ’ ಎಂದು ಮೂಲಗಳು ತಿಳಿಸಿವೆ.

ಐಸಿಸಿಯು ಮಂಗಳವಾರ ಬಿಡುಗಡೆ ಮಾಡಿರುವ ವೇಳಾಪಟ್ಟಿ ಅನ್ವಯ 2024ರಲ್ಲಿ ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿಯಾಗಿ ಟಿ20 ವಿಶ್ವಕಪ್ ಆಯೋಜಿಸಲಿವೆ. ಉತ್ತರ ಅಮೆರಿಕವು ಆತಿಥ್ಯ ವಹಿಸಲಿರುವ ಪ್ರಥಮ ವಿಶ್ವಮಟ್ಟದ ಟೂರ್ನಿ ಇದಾಗಲಿದೆ.

‘11 ಪೂರ್ಣವಧಿ ಸದಸ್ಯ ರಾಷ್ಟ್ರಗಳು ಮತ್ತು ಮೂರು ಸಹ ಸದಸ್ಯ ರಾಷ್ಟ್ರಗಳನ್ನು ಎರಡು ಏಕದಿನ ವಿಶ್ವಕಪ್, ನಾಲ್ಕು ಟಿ20 ವಿಶ್ವಕಪ್ ಮತ್ತು ಎರಡು ಚಾಂಪಿಯನ್ಸ್‌ ಟ್ರೋಫಿ ಟೂರ್ನಿಗಳನ್ನು ಆಯೋಜಿಸಲು ಆಯ್ಕೆ ಮಾಡಲಾಗಿದೆ’ ಎಂದು ಐಸಿಸಿ ಅಪೆಕ್ಸ್‌ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT