ಪಾಕಿಸ್ತಾನ ಪ್ರವಾಹ ಸಂತ್ರಸ್ತರಿಗೆ ಪಂದ್ಯಶುಲ್ಕ ದೇಣಿಗೆ ನೀಡಿದ ಸ್ಟೋಕ್ಸ್

ಇಸ್ಲಾಮಾಬಾದ್: ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಅವರು ಪಾಕಿಸ್ತಾನದ ಎದುರಿನ ಮೂರು ಟೆಸ್ಟ್ ಪಂದ್ಯಗಳ ಸರಣಿಯ ಪಂದ್ಯ ಶುಲ್ಕವನ್ನು ಪಾಕಿಸ್ತಾನದ ಪ್ರವಾಹ ಸಂತ್ರಸ್ತರಿಗೆ ದೇಣಿಗೆಯಾಗಿ ನೀಡಲಿದ್ದಾರೆ. ಸೋಮವಾರ ಅವರು ಈ ವಿಷಯ ತಿಳಿಸಿದ್ದಾರೆ.
ಸರಣಿಯ ಮೊದಲ ಪಂದ್ಯವು ಗುರುವಾರ ರಾವಲ್ಪಿಂಡಿಯಲ್ಲಿ ಆರಂಭವಾಗಲಿದೆ.
ಇತ್ತೀಚಿಗೆ ಪ್ರವಾಹದಿಂದಾಗಿ ಪಾಕಿಸ್ತಾನದ ಸಾವಿರಾರು ಜನ ಪ್ರಾಣ ಕಳೆದುಕೊಂಡಿದ್ದಾರೆ. ಅಪಾರ ಹಾನಿ ಸಂಭವಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.