T20 WC: ಸೆಮಿಫೈನಲ್ ಪಂದ್ಯದಿಂದ ಹೊರಗುಳಿಯಲಿರುವ ರಿಜ್ವಾನ್, ಮಲಿಕ್?

ದುಬೈ: ಐಸಿಸಿ ಟ್ವೆಂಟಿ-20 ವಿಶ್ವಕಪ್‌ನಲ್ಲಿ ಗುರುವಾರ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಮಹತ್ವದ ಸೆಮಿಫೈನಲ್ ಪಂದ್ಯಕ್ಕೂ ಮುನ್ನ ಪಾಕಿಸ್ತಾನದ ಇಬ್ಬರು ಆಟಗಾರರು ಜ್ವರದಿಂದ ಬಳಲುತ್ತಿರುವುದು ವರದಿಯಾಗಿದೆ.
ಪಾಕಿಸ್ತಾನದ ಆಟಗಾರರಾದ ಮೊಹಮ್ಮದ್ ರಿಜ್ವಾನ್ ಹಾಗೂ ಶೋಯಬ್ ಮಲಿಕ್ ಜ್ವರದಿಂದ ಬಳಲುತ್ತಿದ್ದಾರೆ. ಇದರಿಂದಾಗಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ಲಭ್ಯವಾಗುವರೇ ಎಂಬುದು ಅನುಮಾನವೆನಿಸಿದೆ.
ಇದನ್ನೂ ಓದಿ: T20 WC: ಪಂದ್ಯ ಗೆದ್ದರೂ ಸಂಭ್ರಮಿಸದ ನಿಶಾಮ್; ಕಾರಣ ಏನು ಗೊತ್ತಾ?
ಮುಂಜಾಗ್ರತಾ ಕ್ರಮವಾಗಿ ರಿಜ್ವಾನ್ ಹಾಗೂ ಮಲಿಕ್ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಪರೀಕ್ಷಾ ವರದಿಯು ನೆಗೆಟಿವ್ ಆಗಿದೆ ಎಂದು 'ಇಎಸ್‌ಪಿಎನ್ ಕ್ರಿಕ್‌ಇನ್ಫೋ' ವರದಿ ಮಾಡಿದೆ.
ಬುಧವಾರದ ಅಭ್ಯಾಸದ ಅವಧಿಯಿಂದಲೂ ರಿಜ್ವಾನ್ ಹಾಗೂ ಮಲಿಕ್ ಹೊರಗುಳಿದಿದ್ದರು.
ಸೂಪರ್-12 ಹಂತದಲ್ಲಿ ಎರಡನೇ ಗುಂಪಿನಲ್ಲಿ ಎಲ್ಲ ಐದು ಪಂದ್ಯಗಳಲ್ಲಿ ಗೆಲುವು ದಾಖಲಿಸಿರುವ ಪಾಕಿಸ್ತಾನ, ಅಂತಿಮ ನಾಲ್ಕರ ಘಟ್ಟಕ್ಕೆ ಪ್ರವೇಶಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.