ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಕಾ ವಿರುದ್ಧದ ಸರಣಿ: ಹಾರ್ದಿಕ್‌ ಪಾಂಡ್ಯ ನೇತೃತ್ವ

ಟಿ20 ತಂಡದಲ್ಲಿ ಹಿರಿಯರಿಗೆ ಸ್ಥಾನವಿಲ್ಲ
Last Updated 27 ಡಿಸೆಂಬರ್ 2022, 19:43 IST
ಅಕ್ಷರ ಗಾತ್ರ

ನವದೆಹಲಿ: ಆಲ್‌ರೌಂಡರ್ ಹಾರ್ದಿಕ್‌ ಪಾಂಡ್ಯ ಅವರು ಶ್ರೀಲಂಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಕ್ರಿಕೆಟ್‌ ಸರಣಿಗೆ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಹಿರಿಯ ಆಟಗಾರರಾದ ರೋಹಿತ್ ಶರ್ಮ, ವಿರಾಟ್‌ ಕೊಹ್ಲಿ ಮತ್ತು ಕರ್ನಾಟಕದ ವಿಕೆಟ್‌ಕೀಪರ್ ಬ್ಯಾಟರ್‌ ಕೆ.ಎಲ್‌.ರಾಹುಲ್‌ ಅವರನ್ನು ಚುಟುಕು ಕ್ರಿಕೆಟ್ ಸರಣಿಗೆ ಪರಿಗಣಿಸಿಲ್ಲ.

ಲಂಕಾ ವಿರುದ್ಧದ ಏಕದಿನ ಸರಣಿಗೆ ರೋಹಿತ್‌ ಶರ್ಮ ತಂಡವನ್ನು ಮುನ್ನಡೆಸಲಿದ್ದು, ಕೊಹ್ಲಿ ಮತ್ತು ರಾಹುಲ್‌ ಆಡಲಿದ್ದಾರೆ. ಬಿಸಿಸಿಐ ರಾಷ್ಟ್ರೀಯ ಆಯ್ಕೆ ಸಮಿತಿಯು 2024ರ ಟಿ20 ವಿಶ್ವಕಪ್‌ ಟೂರ್ನಿಗೆ ಈಗಿನಿಂದಲೇ ತಂಡವನ್ನು ಕಟ್ಟುವ ನಿಟ್ಟಿನಲ್ಲಿ ಯುವ ಆಟಗಾರರಿಗೆ ಮಣೆ ಹಾಕಿದೆ.

ಸೂರ್ಯಕುಮಾರ್‌ ಯಾದವ್‌ ಮತ್ತು ಹಾರ್ದಿಕ್‌ ಅವರು ಕ್ರಮವಾಗಿ ಟಿ20 ಮತ್ತು ಏಕದಿನ ತಂಡದಲ್ಲಿ ಉಪನಾಯಕನ ಜವಾಬ್ದಾರಿ ನಿರ್ವಹಿಸಲಿದ್ದಾರೆ.

‘ರೋಹಿತ್ ಅವರನ್ನು ಟಿ20 ನಾಯಕತ್ವ ಸ್ಥಾನದಿಂದ ಅಧಿಕೃತವಾಗಿ ತೆಗೆದುಹಾಕಿಲ್ಲ ನಿಜ. ಅದರೆ ಚುಟುಕು ಕ್ರಿಕೆಟ್‌ ತಂಡದಲ್ಲಿ ಯುವ ಆಟಗಾರರಿಗೆ ಅವಕಾಶ ನೀಡಲು ರೋಹಿತ್‌, ಕೊಹ್ಲಿ ಮತ್ತು ರಾಹುಲ್‌ ಅವರನ್ನು ಹೊರಗಿಡಲಾಗಿದೆ. ಹೆಬ್ಬೆರಳಿನ ಗಾಯಕ್ಕೆ ಒಳಗಾಗಿದ್ದ ರೋಹಿತ್‌ ಅಭ್ಯಾಸ ಆರಂಭಿಸಿದ್ದಾರೆ’ ಎಂದು ಬಿಸಿಸಿಐ ಮೂಲಗಳು ಹೇಳಿವೆ.

ವೇಗದ ಬೌಲರ್‌ಗಳಾದ ಶಿವಂ ಮವಿ ಮತ್ತು ಮುಖೇಶ್‌ ಕುಮಾರ್‌ ಅವರು ಇದೇ ಮೊದಲ ಬಾರಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇವರು ಐಪಿಎಲ್‌ ಮಿನಿ ಹರಾಜಿನಲ್ಲಿ ಕ್ರಮವಾಗಿ ₹ 6 ಕೋಟಿ ಹಾಗೂ ₹ 5.50 ಕೋಟಿ ಬೆಲೆ ಪಡೆದುಕೊಂಡಿದ್ದರು.

ರಿಷಭ್ ಅಲಭ್ಯ: ಮಂಡಿನೋವಿನಿಂದ ಬಳಲಿದ್ದ ರಿಷಭ್‌ ಪಂತ್ ಅವರನ್ನು ಲಂಕಾ ವಿರುದ್ಧದ ಸರಣಿಗೆ ಸರಣಿಗೆ ಪರಿಗಣಿಸಿಲ್ಲ. ಅವರು ಎನ್‌ಸಿಎನಲ್ಲಿ ಎರಡು ವಾರ ಮರುಚೈತನ್ಯ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ.

ತಂಡ ಹೀಗಿದೆ:

ಟಿ20 ಸರಣಿ: ಹಾರ್ದಿಕ್‌ ಪಾಂಡ್ಯ (ನಾಯಕ), ಇಶಾನ್‌ ಕಿಶನ್‌ (ವಿಕೆಟ್‌ ಕೀಪರ್‌), ಋತುರಾಜ್‌ ಗಾಯಕವಾಡ್, ಶುಭಮನ್‌ ಗಿಲ್‌, ಸೂರ್ಯಕುಮಾರ್‌ ಯಾದವ್ (ಉಪನಾಯಕ), ದೀಪಕ್‌ ಹೂಡಾ, ರಾಹುಲ್‌ ತ್ರಿಪಾಠಿ, ಸಂಜು ಸ್ಯಾಮ್ಸನ್‌, ವಾಷಿಂಗ್ಟನ್‌ ಸುಂದರ್‌, ಯಜುವೇಂದ್ರ ಚಾಹಲ್, ಅಕ್ಷರ್‌ ಪಟೇಲ್, ಆರ್ಷದೀಪ್‌ ಸಿಂಗ್, ಹರ್ಷಲ್‌ ಪಟೇಲ್, ಉಮ್ರನ್‌ ಮಲಿಕ್, ಶಿವಂ ಮವಿ, ಮುಖೇಶ್‌ ಕುಮಾರ್

ಏಕದಿನ ಸರಣಿ: ರೋಹಿತ್‌ ಶರ್ಮ (ನಾಯಕ), ಶುಭಮನ್‌ ಗಿಲ್, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್, ಶ್ರೇಯಸ್‌ ಅಯ್ಯರ್, ಕೆ.ಎಲ್‌.ರಾಹುಲ್‌ (ವಿಕೆಟ್‌ ಕೀಪರ್‌), ಇಶಾನ್‌ ಕಿಶನ್ (ವಿಕೆಟ್‌ ಕೀಪರ್), ಹಾರ್ದಿಕ್‌ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲದೀಪ್‌ ಯಾದವ್, ಅಕ್ಷರ್‌ ಪಟೇಲ್, ಮೊಹಮ್ಮದ್‌ ಶಮಿ, ಮೊಹಮ್ಮದ್‌ ಸಿರಾಜ್, ಉಮ್ರನ್‌ ಮಲಿಕ್, ಆರ್ಷದೀಪ್‌ ಸಿಂಗ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT