ಶುಕ್ರವಾರ, ಜನವರಿ 27, 2023
17 °C

IND vs NZ: ಪಂತ್ ಮ್ಯಾಚ್ ವಿನ್ನರ್, ಸಂಜು ಕಾಯಬೇಕಾಗಿದೆ: ಧವನ್

ಪಿಟಿಐ Updated:

ಅಕ್ಷರ ಗಾತ್ರ : | |

ಕ್ರೈಸ್ಟ್‌ಚರ್ಚ್: ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ ಸೋಲನ್ನು ಅನುಭವಿಸಿದೆ.

ಸತತ ವೈಫಲ್ಯದ ಹೊರತಾಗಿಯೂ ರಿಷಭ್ ಪಂತ್‌ಗೆ ಅವಕಾಶ ನೀಡಲಾಗಿದೆ. ಮತ್ತೊಂದೆಡೆ ಸಂಜು ಸ್ಯಾಮ್ಸನ್‌ಗೆ ಅವಕಾಶ ನಿರಾಕರಿಸಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.

ಈ ಕುರಿತು ಪಂದ್ಯದ ಬಳಿಕ ಪ್ರತಿಕ್ರಿಯೆ ನೀಡಿರುವ ನಾಯಕ ಶಿಖರ್ ಧವನ್, ರಿಷಭ್ ಪಂತ್ ಮ್ಯಾಚ್ ವಿನ್ನರ್ ಆಗಿದ್ದು, ಸಂಜು ತಮ್ಮ ಅವಕಾಶಕ್ಕಾಗಿ ಕಾಯಬೇಕಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: 

ರಿಷಭ್ ಪಂತ್ ಮ್ಯಾಚ್ ವಿನ್ನರ್ ಎಂಬುದನ್ನು ಸಾಬೀತು ಮಾಡಿದ್ದಾರೆ. ಕಳಪೆ ಫಾರ್ಮ್‌ನಿಂದಾಗಿ ಕಠಿಣ ಸಮಯ ಎದುರಾದಾಗ ಅಂತಹ ಆಟಗಾರನನ್ನು ಬೆಂಬಲಿಸಬೇಕಾಗುತ್ತದೆ ಎಂದು ಹೇಳಿದರು.

ನಿಸ್ಸಂಶಯವಾಗಿಯೂ ಅವಕಾಶ ಸಿಕ್ಕಾಗೆಲ್ಲಾ ಸಂಜು ಅತ್ಯುತ್ತಮವಾಗಿ ಆಡುತ್ತಿದ್ದಾರೆ. ಆದರೆ ಕೆಲವೊಮ್ಮೆ ಅವಕಾಶಕ್ಕಾಗಿ ಕಾಯಬೇಕಾಗಿದೆ. ಏಕೆಂದರೆ ಮತ್ತೊಬ್ಬ ಆಟಗಾರ (ಪಂತ್) ಕೂಡ ಮ್ಯಾಚ್ ವಿನ್ನರ್ ಆಗಿದ್ದು, ಕಠಿಣ ಸಮಯದಲ್ಲಿ ಅವರನ್ನು ಬೆಂಬಲಿಸಬೇಕಾಗುತ್ತದೆ ಎಂದು ತಮ್ಮ ಆಯ್ಕೆಯನ್ನು ಸಮರ್ಥಿಸಿಕೊಂಡರು. 

ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಪಂತ್ ಸತತ ವೈಫಲ್ಯ ಅನುಭವಿಸಿದ್ದಾರೆ. ಕೊನೆಯ ಒಂಬತ್ತು ಇನ್ನಿಂಗ್ಸ್‌ಗಳಲ್ಲಿ (10, 15, 11, 6, 6, 3, 9, 9 27) ನಿರಾಸೆ ಮೂಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು