ನವದೆಹಲಿ: ಅಪಘಾತದ ನಂತರ ಇದೇ ಮೊದಲ ಬಾರಿಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಪ್ರಕಟಿಸಿರುವ ಕ್ರಿಕೆಟರ್ ರಿಷಭ್ ಪಂತ್ ‘ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಮತ್ತು ಚೇತರಿಕೆಯ ಹಾದಿಯಲ್ಲಿದ್ದೇನೆ’ ಎಂದು ಹೇಳಿದ್ದಾರೆ.
‘ನನ್ನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಎಂದು ಎಲ್ಲರಿಗೂ ತಿಳಿಸಲು ಬಯಸುತ್ತೇನೆ. ನಾನೀಗ ಚೇತರಿಕೆಯ ಹಾದಿಯಲ್ಲಿದ್ದೇನೆ. ನಿಮ್ಮೆಲ್ಲರ ಹಾರೈಕೆಗಾಗಿ ನಾನು ಕೃತಜ್ಞನಾಗಿದ್ದೇನೆ. ನನ್ನ ಉತ್ಸಾಹವೂ ಹೆಚ್ಚಿದೆ. ನಾನು ಪ್ರತಿದಿನ ಉತ್ತಮವಾಗುತ್ತಿದ್ದೇನೆ. ಈ ಕಷ್ಟದ ಸಮಯದಲ್ಲಿ ಸಿಕ್ಕ ನಿಮ್ಮ ಪ್ರೀತಿಯ ಮಾತುಗಳು, ಬೆಂಬಲಕ್ಕಾಗಿ ನಾನು ನಿಮ್ಮೆಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಲು ಬಯಸುತ್ತೇನೆ’ ಎಂದು ಅವರು ಇನ್‌ಸ್ಟಾಗ್ರಾಂನ ಪೋಸ್ಟ್‌ನಲ್ಲಿ ಹೇಳಿದ್ದಾರೆ.
ಇದರೊಂದಿಗೆ ಸ್ಪೈಡರ್‌ಮ್ಯಾನ್‌ನ ಗೊಂಬೆಯೊಂದನ್ನು ಸ್ಟೇಟಸ್‌ನಲ್ಲಿ ಹಾಕಿಕೊಂಡಿರುವ ರಿಷಭ್, ‘Thankful, Grateful, Blessed’ ಎಂದು ಬರೆದಿದ್ದಾರೆ.
ಅಪಘಾತದ ನಂತರ ತಮಗೆ ಸಹಾಯ ಮಾಡಿದ ಇಬ್ಬರು ಯುವಕರ (ರಜತ್ ಕುಮಾರ್ ಮತ್ತು ನಿಶು ಕುಮಾರ್) ಚಿತ್ರವನನ್ನು ಪಂತ್ ಟ್ವೀಟರ್‌ನಲ್ಲಿ ಹಂಚಿಕೊಂಡಿದ್ದಾರೆ. ‘ನಾನು ಎಲ್ಲರಿಗೂ ವೈಯಕ್ತಿಕವಾಗಿ ಧನ್ಯವಾದ ಹೇಳಲು ಸಾಧ್ಯವಾಗದೇ ಇರಬಹುದು. ಆದರೆ ನಾನು ಈ ಇಬ್ಬರು ವೀರರನ್ನು ಸ್ಮರಿಸಬೇಕು... ನನ್ನನ್ನು ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸಿದವರು ಇವರು. ಇವರಿಗೆ ನಾನು ಶಾಶ್ವತವಾಗಿ ಕೃತಜ್ಞನಾಗಿರುತ್ತೇನೆ’ ಎಂದು ಪಂತ್ ಹೇಳಿದ್ದಾರೆ.
2022ರ ಡಿ.30ರ ಬೆಳಗ್ಗೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ನಡೆದ ಕಾರು ಅಪಘಾತದಲ್ಲಿ ಕ್ರಿಕೆಟರ್ ರಿಷಭ್ ಪಂತ್ ಗಾಯಗೊಂಡಿದ್ದರು. ಅಪಘಾತ ಸನ್ನಿವಶ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆ ಬೆಚ್ಚಿಬೀಳಿಸುವಂತಿತ್ತು.
ಅಪಘಾತದಲ್ಲಿ ಪಂತ್ ಅವರು ಮೈಮೇಲೆ ವಿಪರೀತ ತರಚಿದ ಗಾಯಗಳಾಗಿದ್ದವು. ಇದಕ್ಕಾಗಿ ವೈದ್ಯರು ಯಶಸ್ವಿ ಪ್ಲಾಸ್ಟಿಕ್ ಸರ್ಜರಿಯನ್ನೂ ಮಾಡಿದ್ದಾರೆ. ಇನ್ನೊಂದೆಡೆ ಅವರ ಮಂಡಿ ಅಸ್ತಿ ರಜ್ಜು ಕೂಡ ಹಾನಿಯಾಗಿತ್ತು. ಅದಕ್ಕಾಗಿ ಶಸ್ತ್ರ ಚಿಕಿತ್ಸೆಯನ್ನೂ ನೆರವೇರಿಸಲಾಗಿದೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಡೆಹ್ರಾಡೂನ್‌ನಿಂದ ಮುಂಬೈಗೆ ವಿಮಾನ ಮೂಲಕ ಸ್ಥಳಾಂತರಿಸಲಾಗಿದೆ.
ಇವುಗಳನ್ನೂ ಓದಿ
ಅಗತ್ಯವಿದ್ದರೆ ಪಂತ್ ಅವರನ್ನು ದೆಹಲಿಗೆ ಏರ್ಲಿಫ್ಟ್ ಮಾಡಲಾಗುವುದು: ಡಿಡಿಸಿಎ
ಅಮ್ಮನಿಗೆ ಅಚ್ಚರಿ ನೀಡಲು ಹೊರಟಿದ್ದ ರಿಷಭ್ ಪಂತ್; ಅಪಘಾತಕ್ಕೆ ಕಾರಣ ಏನು?
ಕಾರು ನಿಧಾನವಾಗಿ ಚಲಾಯಿಸಿ - 2019ರಲ್ಲೇ ರಿಷಭ್ಗೆ ಸಲಹೆ ನೀಡಿದ್ದ ಧವನ್
ಮಾತೃ ವಿಯೋಗದ ನೋವಿನ ನಡುವೆಯೂ ರಿಷಭ್ ಪಂತ್ ಯೋಗಕ್ಷೇಮ ಕೋರಿದ ಮೋದಿ
Video| ರಿಷಭ್ ಪಂತ್ ಕಾರು ಅಪಘಾತದ ಸಿಸಿ ಕ್ಯಾಮೆರಾ ದೃಶ್ಯಾವಳಿ ಬಿಡುಗಡೆ!
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.