ದುಬೈ: ಭಾರತ ತಂಡದ ರನ್ ಯಂತ್ರ ವಿರಾಟ್ ಕೊಹ್ಲಿ ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ ಅಗ್ರ ಹತ್ತರಿಂದ ಹೊರಬಿದ್ದಿದ್ದಾರೆ. ಕಳೆದ ಆರು ವರ್ಷಗಳಲ್ಲಿ ಅವರು ಕಂಡ ದೊಡ್ಡ ಕುಸಿತ ಇದಾಗಿದೆ.
ಆದರೆ, ವಿಕೆಟ್‌ಕೀಪರ್ ಬ್ಯಾಟರ್ ರಿಷಭ್ ಪಂತ್ ಐದನೇ ಸ್ಥಾನಕ್ಕೇರಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಕೊಹ್ಲಿ ನಾಲ್ಕು ಸ್ಥಾನಗಳ ಕುಸಿತ ಕಂಡು, 13ನೇ ಸ್ಥಾನಕ್ಕಿಳಿದಿದ್ದಾರೆ. ಇಂಗ್ಲೆಂಡ್ ವಿರುದ್ಧ ಮಂಗಳವಾರ ಮುಕ್ತಾಯವಾದ ಟೆಸ್ಟ್ ಪಂದ್ಯದಲ್ಲಿಯೂ ಅವರು ವೈಫಲ್ಯ ಅನುಭವಿಸಿದ್ದರು.
ಪಂತ್ ಮೊದಲ ಇನಿಂಗ್ಸ್‌ನಲ್ಲಿ ಶತಕ ಮತ್ತು ಎರಡನೇ ಇನಿಂಗ್ಸ್‌ನಲ್ಲಿ ಅರ್ಧಶತಕ ಬಾರಿಸಿದ್ದರು. ಇದೇ ಪಂದ್ಯದಲ್ಲಿ ಭರ್ಜರಿ ಶತಕ ಬಾರಿಸಿದ್ದ ಇಂಗ್ಲೆಂಡ್ ತಂಡದ ಜೋ ರೂಟ್ ಒಟ್ಟು 923 ಅಂಕಗಳೊಂದಿಗೆ ಅಗ್ರಸ್ಥಾನ ಗಳಿಸಿದ್ದಾರೆ. ಎರಡೂ ಇನಿಂಗ್ಸ್‌ಗಳಲ್ಲಿ ಶತಕ ಬಾರಿಸಿದ್ದ ಜಾನಿ ಬೆಸ್ಟೊ 10ನೇ ಸ್ಥಾನಕ್ಕೇರಿದ್ದಾರೆ.
ಆಸ್ಟ್ರೇಲಿಯಾದ ಮಾರ್ನಸ್ ಲಾಬುಷೇನ್ ಮತ್ತು ಸ್ಟೀವ್ ಸ್ಮಿತ್ ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನ ಪಡೆದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.