ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಪ್ಪ, ನಿಮಗೆ ವಯಸ್ಸಾಯ್ತು: ಜೀವಾ

Last Updated 7 ಜುಲೈ 2018, 16:51 IST
ಅಕ್ಷರ ಗಾತ್ರ

ಕಾರ್ಡಿಫ್‌: ‘ಹುಟ್ಟುಹಬ್ಬದ ಶುಭಾಷಯಗಳು ಅಪ್ಪ. ನಿಮಗೆ ವಯಸ್ಸಾಗುತ್ತಿದೆ’ ಎಂದು ಜೀವಾ ಮಹೇಂದ್ರ ಸಿಂಗ್‌ ದೋನಿ ತನ್ನ ತಂದೆಗೆ ಹೇಳಿದ್ದಾಳೆ.

ವಿಶ್ವ ಕ್ರಿಕೆಟ್‌ನ ಶ್ರೇಷ್ಠ ಫಿನಿಶರ್‌ ಎಂಬ ಹೆಗ್ಗಳಿಕೆ ಹೊಂದಿರುವ ಭಾರತ ತಂಡದ ವಿಕೆಟ್‌ ಕೀಪರ್‌ ಮಹೇಂದ್ರ ಸಿಂಗ್‌ ದೋನಿ ಅವರು ಶನಿವಾರ 37ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಈ ಸಂಬಂಧ ಬಿಸಿಸಿಐ ತನ್ನ ಟ್ವಿಟರ್‌ ಖಾತೆಯಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದೆ.

ಈ ವಿಡಿಯೊದಲ್ಲಿ ದೋನಿ ಪತ್ನಿ ಸಾಕ್ಷಿ ಸಿಂಗ್‌, ಮಗಳು ಜೀವಾ, ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಹಾಗೂ ಇನ್ನಿತರ ಪ್ರಮುಖರು ಅವರಿಗೆ ಜನ್ಮದಿನದ ಶುಭಾಷಯ ಕೋರಿದ್ದಾರೆ.

ಇಂಗ್ಲೆಂಡ್‌ ವಿರುದ್ಧದ ಎರಡನೇ ಟ್ವೆಂಟಿ–20 ಪಂದ್ಯದ ನಂತರ ದೋನಿ ತಮ್ಮ ಪತ್ನಿ, ಮಗಳು ಹಾಗೂ ತಂಡದ ಸಹ ಆಟಗಾರರೊಂದಿಗೆ ಜನ್ಮದಿನ ಆಚರಿಸಿಕೊಂಡರು.

ವಿರಾಟ್‌ ಕೊಹ್ಲಿ ಅವರ ಪತ್ನಿ, ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ ಕೂಡ ಇದರಲ್ಲಿ ಭಾಗಿಯಾಗಿದ್ದರು.

*

*

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT