ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

IPL–2023 | ಭಾನುಕ ಅರ್ಧಶತಕ; ರೈಡರ್ಸ್‌ಗೆ 192 ಗುರಿ ನೀಡಿದ ಪಂಜಾಬ್ ಕಿಂಗ್ಸ್

Last Updated 1 ಏಪ್ರಿಲ್ 2023, 11:51 IST
ಅಕ್ಷರ ಗಾತ್ರ

ಮೊಹಾಲಿ: ಭಾನುಕ ರಾಜಪಕ್ಸ ಗಳಿಸಿದ ಬಿರುಸಿನ ಅರ್ಧಶತಕದ ಬಲದಿಂದ ಪಂಜಾಬ್‌ ಕಿಂಗ್ಸ್‌ ತಂಡವು ಕೋಲ್ಕತ್ತ ನೈಟ್ ರೈಡರ್ಸ್‌ ವಿರುದ್ಧ ಸವಾಲಿನ ಮೊತ್ತ ಕಲೆಹಾಕಿದೆ.

ಇಲ್ಲಿನ ಪಂಜಾಬ್ ಕ್ರಿಕೆಟ್‌ ಸಂಸ್ಥೆ ಕ್ರೀಡಾಂಗಣದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟಿಂಗ್‌ ಮಾಡುವ ಅವಕಾಶ ಪಡೆದ ಪಂಜಾಬ್‌, ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 191 ರನ್ ಗಳಿಸಿದೆ.

ನಾಯಕ ಶಿಖರ್‌ ಜೊತೆ ಇನಿಂಗ್ಸ್ ಆರಂಭಿಸಿದ ಪ್ರಭ್‌ಸಿಮ್ರನ್‌ ಸಿಂಗ್‌ ಬಿರುಸಿನ ಆರಂಭ ಮಾಡಿದರು. ಮೊದಲೆರಡು ಓವರ್‌ಗಳ ಎಲ್ಲ ಎಸೆತಗಳನ್ನು ಎದುರಿಸಿದ ಅವರು ತಲಾ ಎರಡು ಬೌಂಡರಿ ಮತ್ತು ಸಿಕ್ಸರ್‌ ಸಹಿತ 23 ರನ್‌ ಗಳಿಸಿ ಔಟಾದರು.

ಬಳಿಕ ರಾಜಪಕ್ಸ ಮತ್ತು ಶಿಖರ್‌ ಆಟ ರಂಗೇರಿತು. ಈ ಜೋಡಿ ಎರಡನೇ ವಿಕೆಟ್‌ ಪಾಲುದಾರಿಕೆಯಲ್ಲಿ 86 ರನ್‌ ಕಲೆಹಾಕಿತು. 32 ಎಸೆತಗಳಲ್ಲಿ 50 ರನ್‌ ಬಾರಿಸಿದ ಬಾನುಕ 11ನೇ ಓವರ್‌ನಲ್ಲಿ ವರುಣ್‌ ಚಕ್ರವರ್ತಿಗೆ ವಿಕೆಟ್‌ ಒಪ್ಪಿಸಿದರು. ಶಿಖರ್‌ 40 ರನ್‌ ಗಳಿಸಿ ಔಟಾದರು.

ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಆಡುತ್ತಿರುವ ಜಿಂಬಾಬ್ವೆಯ ಸಿಕಂದರ್ ರಾಜಾ, 16 ರನ್ ಗಳಿಸಿದರು. ಕೊನೆಯಲ್ಲಿ ಬೀಸಾಟದ ಮೂಲಕ ಗಮನ ಸೆಳೆದ ಸ್ಯಾಮ್‌ ಕರನ್‌ (26) ತಂಡದ ಮೊತ್ತವನ್ನು 190ರ ಗಡಿ ದಾಟಿಸಿದರು.

ನಾಯಕ ಶ್ರೇಯಸ್‌ ಅಯ್ಯರ್‌ ಗಾಯಗೊಂಡಿದ್ದು, ಅವರ ಅನುಪಸ್ಥಿತಿಯಲ್ಲಿ ನಿತೀಶ್ ರಾಣಾ ಕೋಲ್ಕತ್ತ ತಂಡವನ್ನು ಮುನ್ನಡೆಸುತ್ತಿದ್ದಾರೆ.

ರೈಡರ್ಸ್‌ ಪರ ಟಿಮ್‌ ಸೌಥಿ 2 ವಿಕೆಟ್‌ ಪಡೆದರೆ, ವರುಣ್‌ ಚಕ್ರವರ್ತಿ, ಸುನಿಲ್ ನರೇನ್‌ ಮತ್ತು ಉಮೇಶ್‌ ಯಾದವ್‌ ತಲಾ ಒಂದೊಂದು ವಿಕೆಟ್ ಕಿತ್ತರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT