ಕರಾಚಿ: ಟೆಸ್ಟ್ ಹಾಗೂ ಟ್ವೆಂಟಿ–20 ಸರಣಿಗಳನ್ನು ಆಡಲುಜುಲೈನಲ್ಲಿ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಒಪ್ಪಿದೆ. ಆದರೆ ಟೂರ್ನಿಗೆ ತೆರಳಲೇಬೇಕೆಂದು ಆಟಗಾರರನ್ನು ಒತ್ತಾಯಿಸುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ.

‘ನಿಗದಿತ ತಲಾ ಮೂರು ಟೆಸ್ಟ್ ಮತ್ತು ಟ್ವೆಂಟಿ–20 ಪಂದ್ಯಗಳನ್ನು ಆಡಲು ನಮ್ಮ ತಂಡ ಇಂಗ್ಲೆಂಡ್‌ಗೆ ತೆರಳಲು ತಾತ್ವಿಕವಾಗಿ ಒಪ್ಪಿಗೆ ಸೂಚಿಸುತ್ತಿದ್ದೇವೆ’ ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸೀಂ ಖಾನ್ ಹೇಳಿದ್ದಾಗಿ ಸ್ಥಳೀಯ ಪತ್ರಿಕೆಯೊಂದು ವರದಿ ಮಾಡಿದೆ.

ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಮಂಡಳಿಯೊಂದಿಗೆ ಪಿಸಿಬಿ ವಿಡಿಯೊ ಲಿಂಕ್ ಮೂಲಕಶುಕ್ರವಾರ ಚರ್ಚೆ ನಡೆಸಿತ್ತು. ಪ್ರೇಕ್ಷಕರಿಲ್ಲದೆ ಖಾಲಿ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ಆಡಲು ಒಪ್ಪಿಕೊಂಡಿದೆ. ಆದರೆ ಟೂರ್ನಿಯಲ್ಲಿ ಪಾಲ್ಗೊಳ್ಳುವ ಆಯ್ಕೆಯನ್ನು ಆಟಗಾರರಿಗೆ ನೀಡಿದೆ.

‘ಒಂದು ವೇಳೆ ಆಟಗಾರನೊಬ್ಬ ತಾನು ಬರುವುದಿಲ್ಲ ಎಂದರೂ ಅವರ ನಿರ್ಧಾರವನ್ನು ಒಪ್ಪಿಕೊಳ್ಳುತ್ತೇವೆ. ಆತನ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಿಲ್ಲ. ಆ ಕುರಿತು ಆಟಗಾರರು ಮಾಹಿತಿ ನೀಡಬೇಕು’ ಎಂದು ಖಾನ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.